ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನ ಕೋಲ್ಕತ್ತಾ ಹೈಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಬ್ರತಾ ತಾಲ್ಡೂಕರ್ ಮತ್ತು ಲಪಿತಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ಪೀಠವು ತನಿಖೆಯ ಮೇಲ್ವಿಚಾರಣೆಯನ್ನು ಏಕಸದಸ್ಯ ಪೀಠವು ನಡೆಸಲಿದೆ ಎಂದು ಹೇಳಿದೆ.
ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಅಗತ್ಯವಿದಲ್ಲಿ ಅಕ್ರಮ ಹಣ ವರ್ಗಾವಣೆಯ ತನಿಖೆಯನ್ನು ಸಹ ನಡೆಸಲಾಗುವುದು ಎಂದು ಪೀಠ ಅಭಿಪ್ರಾಯಪಟ್ಟಿದೆ.
