ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ಆಂತರಿಕ ಚಟುವಟಿಕೆಗಳು ಬಿರುಸುಗೊಂಡಿದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ (Cm siddaramaiah) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ.

ಈಗಾಗಲೇ ನಿನ್ನೆಯೇ ದೆಹಲಿಗೆ ತೆರಳಿ ವಾಸ್ತವ್ಯ ಹೂಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಇಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನ ಭೇಟಿ ಡಿಸಿಎಂ ಮತ್ತು ಸಿಎಂ ಭೇಟಿಯಾಗಲಿದ್ದಾರೆ.ಆ ಬಳಿಕ ಇಂದು ರಾತ್ರಿ ಕರ್ನಾಟಕ ಭವನದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಹೈಕಮಾಂಡ್ ನಾಯಕರ ಜೊತೆ ಸಿಎಂ, ಡಿಸಿಎಂ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದ್ದು, ಹೈಕಮಾಂಡ್ ಮುಂದೆ ಪ್ರತ್ಯೇಕವಾಗಿ ತಮ್ಮ ವಾದಗಳನ್ನ ಮಂಡಿಸಲು ಸಿಎಂ ಹಾಗೂ ಡಿಸಿಎಂ ತಯಾರಿ ನಡೆಸಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮುಂದೆ ಸಿಎಂ ತಮ್ಮ ಬೇಸರ ಹೊರ ಹಾಕುವ ಸಾಧ್ಯತೆಯಿದೆ.