ಮೈಸೂರು : ಪ್ರಧಾನಿ ಮೋದಿ ದೇಶದ ಚುಕ್ಕಾಣಿ ಹಿಡಿದು 9 ವರ್ಷ ಆಯ್ತು . ಪ್ರಧಾನಿ ಮೋದಿ ಸಾಧನೆಗಳನ್ನು ಜನರಿಗೆ ತಲುಪಿಸೋಕೆ ಪ್ರಚಾರ ಅಭಿಯಾನ ಆರಂಭಿಸಿದ್ದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ . ಮೈಸೂರಿನಲ್ಲಿ ಮಾತನಾಡಿದ ಅವರು ಒಂದು ತಿಂಗಳುಗಳ ಕಾಲ ರಾಜ್ಯದಲ್ಲಿ ಮನೆ ಮನೆಗೂ ತಲುಪುತ್ತೇವೆ. ಜೂನ್ 22ರಂದು ಕಾರ್ಯಕರ್ತರೊಂದಿಗೆ ದೊಡ್ಡ ಸಭೆ ಮಾಡ್ತಿದ್ದೇವೆ ಈ ಸಭೆಯ ನೇತೃತ್ವವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವಧಿಯಲ್ಲಿ ಮೈಸೂರಿಗೆ ನೀಡಿರುವ ಕೊಡುಗೆ ಅಪಾರವಾಗಿದೆ. ಮೋದಿ ಅವಧಿಯಲ್ಲಿ AIR, ROAD, TRAIN ಕನೆಕ್ಟಿವಿಟಿ ಜಾಸ್ತಿಯಾಗಿದೆ .ಮೈಸೂರು-ಬೆಂಗಳೂರು ಹೈವೇಗೆ 10 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿಗೆ ಔಟರ್ ರಿಂಗ್ ರೋಡ್ ಮಾಡಲಾಗುತ್ತೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈಲ್ವೆ ಇಲಾಖೆಯಲ್ಲಿಯೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈಲ್ವೆ ಸ್ಟೇಷನ್ನಲ್ಲಿ ಹೊಸ ಪ್ಲಾಟ್ಫಾರಂ ಕಾರ್ಯ ನಡೆಯುತ್ತಿದೆ . ಮೈಸೂರಿಗೆ ಗ್ರಾಮ್ ಸಡಕ್ ಯೋಜನೆಯ ಅಡಿಯಲ್ಲಿ 152 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.