ಹಳೇ ಪಿಂಚಣಿ ವ್ಯವಸ್ಥೆ(Old Pension Scheme) ಜಾರಿ ಮಾಡಬೇಕು ಎನ್ನುವ ಕೂಗು ಕಳೆದ ವರ್ಷ ಜೋರಾಗಿತ್ತು. ಬಿಜೆಪಿ(BJP Karnataka) ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗಲೇ ಸಾಕಷ್ಟು ಹೋರಾಟಗಳು ನಡೆದಿದ್ದವು. ಆದರೆ ಬಿಜೆಪಿ ಸರ್ಕಾರ ಸೊಪ್ಪು ಹಾಕಿರಲಿಲ್ಲ. ಆ ವೇಳೆ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕಾಂಗ್ರೆಸ್ ಪಕ್ಷ(Congress Party), ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ NPS ರದ್ದು ಮಾಡಿ OPS ಜಾರಿ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದಿದ್ದರು. ಕಾಂಗ್ರೆಸ್ ಪಕ್ಷ ಕೊಟ್ಟಿದ್ದ ಭರವಸೆಯನ್ನು ಉಳಿಸಿಕೊಂಡಿದೆ. ಹಳೇ ಪಿಂಚಣಿ ವ್ಯವಸ್ಥೆ ಜಾರಿ ಮಾಡಿದೆ ರಾಜ್ಯ ಸರ್ಕಾರ(State Government)
2006ರ ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಮಾಡಲಾಗಿದೆ. ಆದೇಶ ಪ್ರತಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ ಸಿಎಂ ಸಿದ್ದರಾಮಯ್ಯ. ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ. ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಎಲ್ಲಾ 13 ಸಾವಿರ ಎನ್ಪಿಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಸಿಎಂ ಸಿದ್ದರಾಮಯ್ಯ.