• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾದಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ- ಕೇಂದ್ರ ಸರ್ಕಾರ

Any Mind by Any Mind
June 20, 2021
in ದೇಶ
0
ಕರೋನಾದಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ- ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ಮೃತಪಟ್ಟವರಿಗೆ ತಲಾ ನಾಲ್ಕು ಲಕ್ಷ ರೂ. ಪರಿಹಾರ ನಿಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸಬೇಕೆಂದು ಕೇಳಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ಸುಪ್ರಿಂಕೊರ್ಟ್ ಕೇಂದ್ರಕ್ಕೆ ಪ್ರತಿಕ್ರಿಯಿಸಲು ಹೇಳಿತ್ತು. 

ADVERTISEMENT

ತನ್ ೧೮೩ ಪುಟಗಳ ಅಫಿಡವಿಟ್ ನಲ್ಲಿ, “ಕೋವಿಡ್ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಬರದಿರುವುದರಿಂದ ಪರಿಹಾರ ನೀಡಲು ಸಾಧ್ಯವಿಲ್ಲ. ಮೇಲಾಗಿ ಎಲ್ಲಾ ರಾಜ್ಯಗಳು ತೀವ್ರವಾದ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದೆ. ಕರೋನಾದಿಂದ ಮೃತಪಟ್ಟವರಿಗೆ ತಲಾ ನಾಲ್ಕು ಲಕ್ಷ ರೂ. ನೀಡುವುದು ಅಸಾಧ್ಯ. ವಿಕೋಪ ನಿರ್ವಹಣಾ ಕಾನೂನಿನ ಅಡಿಯಲ್ಲಿ ಪ್ರಾಕೃತಿಕ ವಿಕೋಪಗಳಾದ ಭೂಕಂಪ, ಪ್ರವಾಹದಂತಹ ಸಂದರ್ಭಗಳಲ್ಲಿ ಮಾತ್ರ ಪರಿಹಾರ ನೀಡಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ತುಂಬಾ ಹೆಚ್ಚಿದೆ. ಹೀಗಾಗಿ ಇದನ್ನು ವಿಕೋಪ ನಿರ್ವಹಣಾ ಕಾನೂನಿನ ಅಡಿಯಲ್ಲಿ ತರಲು ಸಾಧ್ಯವಿಲ್ಲ,” ಎಂದಿದೆ. 

“ತೆರಿಗೆಯಿಂದ ಬರುತ್ತಿದ್ದ ಆದಾಯದಲ್ಲಿಯೂ ಕೊರತೆ ಉಂಟಾಗಿದೆ. ಬಾಕಿಯಿರುವ ಅಲ್ಪ ಸಂಪನ್ಮೂಲಗಳಿಂದ ಪರಿಹಾರ ನೀಡಿದರೆ, ಆರೋಗ್ಯ ಕ್ಷೇತ್ರಕ್ಕೆ ಮತ್ತು ಇತರ ಕ್ಷೇತ್ರಗಳಿಗೆ ಅನುದಾನದ ಕೊರತೆ ಉಂಟಾಗುತ್ತದೆ. ಇದರಿಂದಾಗಿ ಒಳಿತಾಗುವುದಕ್ಕಿಂತ ಕೆಡುಕಾಗುವುದೇ ಜಾಸ್ತಿ,” ಎಂದು ಕೇಂದ್ರ ಹೇಳಿದೆ. 

ಇನ್ನು ಸುಪ್ರೀಂ ಕೋರ್ಟ್ ನ ಹಳೆಯ ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಾಲಯವು ಸರ್ಕಾರದ ಪರವಾಗಿ ಕಾರ್ಯನಿರ್ವಹಣಾ ನೀತಿಗಳ ಕುರಿತು ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. 

“ಹಿಂದಿನ ಹಲವು ತೀರ್ಪುಗಳು ಈ ಕುರಿತಾಗಿ ಬೆಳಕು ಚೆಲ್ಲುತ್ತವೆ. ಆಡಳೊತಾತ್ಮಕವಾಗಿ ನಿರ್ಧಾರವನ್ನು ಕೈಗೊಳ್ಳಲು ಅಧಿಕಾರ ಇರುವಂತಹ ವ್ಯವಸ್ಥೆಗೆ ಮಾತ್ರ ಈ ಹಕ್ಕಿದೆ. ನ್ಯಾಯಾಲಯವು ಇದರಲ್ಲಿ ಮಧ್ಯಪ್ರವೇಶಿಸುವಂತಿಲ್ಲ ಎಂದು ಈ ಹಿಂದಿನ ಹಲವು ತೀರ್ಪುಗಳಲ್ಲಿ ಹೇಳಲಾಗಿದೆ,” ಎಂದು ಕೇಂದ್ರ ತನ್ನ ಅಫಿಡವಿಟ್ ನಲ್ಲಿ ಉತ್ತರಿಸಿದೆ. 

ಈ ಪ್ರಕರಣದ ವಿಚಾರಣೆಯು ಸೋಮವಾರ ನಡೆಯಲಿದ್ದು, ಕೋರ್ಟ್ ನ ಆದೇಶ ಏನಾಗಿರುತ್ತದೆ ಎಂಬುದನ್ನು ಕಾದುನೋಡಬೇಕಿದೆ. 

Previous Post

ಕರೋನ 3ನೇ ಅಲೆ: 2ನೇ ಅಲೆಯಲ್ಲಿ ಕಲಿತ ಪಾಠಗಳನ್ನು ಸರ್ಕಾರ ಈಗ ಕಾರ್ಯರೂಪಕ್ಕೆ ತರದಿದ್ದರೆ ಮತ್ತಷ್ಟು ಸಾವು ನೋವು.!

Next Post

ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!