ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಘನಘೋರ ದುರಂತವೊಂದು ನಡೆದಿದ್ದು ನೀರಿನ ಟ್ಯಾಂಕರ್ ಹರಿದು ಬಾಲಕಿ ಪ್ರತಿಕ್ಷಾ (4) ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಸರ್ಜಾಪುರ ರಸ್ತೆಯ ಸೆರೆನಿಟಿ ಲೇಔಟ್ನಲ್ಲಿ ಘಟನೆ ನಡೆದಿದ್ದು ಗಾಡಿಯನ್ನು ರಿವರ್ಸ್ ತೆಗೆಯುವಾಗ ಚಾಲಕನ ಅಜಾಗರೂಕತೆಯಿಂದಾಗಿ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಘಟನೆ ಸಂಬಂಧ HSR ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.