• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು .

ಪ್ರತಿಧ್ವನಿ by ಪ್ರತಿಧ್ವನಿ
December 25, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ

ADVERTISEMENT

ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರದ ಹಾಡುಗಳನ್ನು ಜಯನಗರ ವಿಧಾನಸಭಾ ಸದಸ್ಯರಾದ ಸಿ.ಕೆ.ರಾಮಮೂರ್ತಿ, ಬಿ.ಜೆ.ಪಿ ಮುಖಂಡರಾದ ರೇಣುಕಾಚಾರ್ಯ ಅನಾವರಣ ಮಾಡಿದರು. ಶಿವಗಂಗೆಯ ಶ್ರೀಮಲಯ ಶಾಂತಮುನಿ ಸ್ವಾಮಿಗಳು ಹಾಗೂ ಶ್ರೀ ಆದಿತ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಡಿ.ಕೆ.ರಾಮಕೃಷ್ಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ.ಹರೀಶ್ ಹಾಗೂ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವಾನಾಥ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇನಿಫಿನಿಟಿ ಕ್ರಿಯೇಷನ್ಸ್ ಲಾಂಛನದಲ್ಲಿ ಇಪ್ಪತ್ತು ನಿರ್ಮಾಪಕರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.‌ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ. ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿದ್ದು, ಪ್ರೇರಣ ಈ ಚಿತ್ರದ ನಾಯಕಿ, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದ ಹಿರಿಯ ನಟರು ಈ ಚಿತ್ರದಲ್ಲಿದ್ದಾರೆ. ಚಿತ್ರ‌ದ ಕೆಲವು ನಿರ್ಮಾಪಕರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, 2025 ರ ಜನವರಿ ಅಂತ್ಯಕ್ಕೆ ತೆರೆಗೆ ತರಲು ಸಿದ್ದತೆ ನಡೆಯುತ್ತಿದೆ ಎಂದು ನಿರ್ದೇಶಕ ಅನಂತರಾಜು ತಿಳಿಸಿದರು.

ಇದೊಂದು ರಿವೆಂಜ್ ಸ್ಟೋರಿ. ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದನ್ನು ಈ ಚಿತ್ರದಲ್ಲಿ ನಿರ್ದೇಶಕರು ನನ್ನ ಪಾತ್ರದ ಮೂಲಕ ತೋರಿಸಿದ್ದಾರೆ ಎಂದು ನಾಯಕ ರಾಜೀವ್ ರೆಡ್ಡಿ ಹೇಳಿದರು.

ನಾಯಕಿ ಪ್ರೇರಣ, ನಿರ್ಮಾಪಕರಾದ ಮಂಜುನಾಥ್,‌ ಕರ್ನಲ್ ರಾಜೇಂದ್ರ, ಶಿವಪ್ಪ ಕುಡ್ಲೂರು, ಆಂಟೋನಿ ರಾಜ್, ಕೃಷ್ಣಮೂರ್ತಿ ಹಾಗೂ ಸಂಗೀತ ನಿರ್ದೇಶಕ ನಾಗ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.

Tags: capital citykannada cinemaKannada moviemanjunathPreranaRajiv ReddysandalwoodShivappa Kudluru
Previous Post

ಮುನಿರತ್ನಗೆ ಮೊಟ್ಟೆ ಎಸೆತ, ಟ್ರೀಟ್ ಮೆಂಟ್‌ ಮಾಡಿದ ಡಾ.ಸಿ.ಎನ್‌ ಮಂಜುನಾಥ್‌..

Next Post

Pushpa-2: ಮೃತ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್..!!

Related Posts

Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
0

ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ...

Read moreDetails

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

July 30, 2025

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

July 30, 2025

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

July 30, 2025
Next Post

Pushpa-2: ಮೃತ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್..!!

Recent News

Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 
Top Story

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

by Chetan
July 30, 2025
Top Story

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

by ಪ್ರತಿಧ್ವನಿ
July 30, 2025
Top Story

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada