ಕಾಂಗ್ರೆಸ್ನಲ್ಲಿ ತಮ್ಮನ್ನು ನಡೆಸಿಕೊಂಡ ರೀತಿ ಬಗ್ಗೆ ಬೇಸರಗೊಂಡಿರುವ ಪಂಜಾಬ್ನ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಸ್ವಂತ ಪಕ್ಷವನ್ನು ಸ್ಥಾಪಿಸಲು ಮುಂದಾಗಿದ್ದಾರೆಂದು ಸುದ್ದಿ ಮೂಲಗಳು ತಿಳಿಸಿವೆ.
ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿರುವ ಸಿಂಗ್ ʻನಾನು ಜನತಾ ನ್ಯಾಯಲಯದಲ್ಲಿ ಜನರ ಮುಂದೆ ಹೋರಾಡುತ್ತೇನೆʼ ಮತ್ತು ಕಳೆದ ವರ್ಷ ಸೋನಿಯಾ ಗಾಂಧಿರವರಿಗೆ ಪತ್ರ ಬರೆದ ಜಿ-23 ನಾಯಕರನ್ನು ಸಹ ನಾನು ಭೇಟಿ ಮಾಡುತ್ತೇನೆ ಎಂದು ಕ್ಯಾಪ್ಟನ್ ಹೇಳಿದ್ದಾರೆ.
ಇತ್ತೀಚಿಗೆ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿದ ಕ್ಯಾಪ್ಟನ್ ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಥಾಪಿಸಲು ಹೊರಟಿರುವ ನೂತನ ಪಕ್ಷದಿಂದ ಬಿಜೆಪಿ ಜೊತೆಗೆ ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ತಮ್ಮ ಮುಂದಿನ ದೆಹಲಿ ಭೇಟಿ ವೇಳೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ವಿಚಾರವಾಗಿ ಮಾತನಾಡಿದ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ʻಬಿಜೆಪಿಯಂದಿಗೆ ಮೈತ್ರಿ ಮಾಡಿಕೊಳ್ಳು ಹೊರಟಿರುವ ಅಮರೀಂದರ್ರವರೇ ಈಗ ನಿಮ್ಮ ಜಾತ್ಯಾತೀತ ನಿಲುವು ಎಲ್ಲಿಗೆ ಹೋಯಿತುʼ ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ನಲ್ಲಿ ಬಹುಮತದೊಂದಿಗೆ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಪರಿನಾಮ ನೆಟ್ಟಗಿರುವುದಿಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕ್ಯಾಪ್ಟನ್ ಸೆಪ್ಟೆಂಬರ್ 29ರಂದು ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ರಾವತ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಯಿಸಿದ ಕ್ಯಾಪ್ಟನ್ ʻಅವರ ಹೇಳಿಕೆ ಸಂಪೂರ್ಣ ಅಸಂಬದ್ದ ಅವರಂತಹ ಕೆಟ್ಟ ಟೀಕಾಕಾರರು ಮತ್ತೊಬ್ಬರಿಲ್ಲ ಶತ್ರುಗಳು ಸಹ ಅವರ ಸಮಗ್ರತೆಯನ್ನು ಅವಮಾನಿಸುವುದಿಲ್ಲʼ ಎಂದು ತಿರುಗೇಟು ನೀಡಿದ್ದಾರೆ.
ಕ್ಯಾಪ್ಟನ್ ಬಿಜೆಪಿಯೊಂದಿಗೆ ಹೊಂದಾನಿಕೆ ಮುಖ್ಯವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಮೇಲೆ ಕೇಂದ್ರಿಕರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಒಂದು ಮೋದಿ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾದರೆ ತಾವು ಬಿಜೆಪಿ ಸೇರುವ ಅಥವಾ ಬೆಂಬಲಿಸಲು ಹಾದಿ ಸುಗಮವಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಅಮರೀಂದರ್ ಪ್ರಧಾನಿ ಮೋದಿರವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ, ಅವರ ಭೇಟಿ ಕುರಿತು ಇನ್ನು ಖಚಿತತೆ ಸಿಕ್ಕಿಲ್ಲ