ಮಂಗಳೂರು: ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರ್ಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿರೋಡ್ ವೃತ್ತದಲ್ಲಿ ನಡೆದಿದೆ. ಬೆಂಗಳೂರಿನ ಪೀಣ್ಯ ಮೂಲದವಾರದ ರವಿ(64), ನಂಜಮ್ಮ(75) ಹಾಗೂ ರಮ್ಯಾ(23) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ನಂಜಮ್ಮ ಕುಟುಂಬಸ್ಥರು ಬೆಂಗಳೂರಿನಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಹೊರಟಿದ್ದರು. ಕಾರು ಬಂಟ್ವಾಳದ ಬಿಸಿರೋಡ್ ವೃತ್ತದ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸರ್ಕಲ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಘಟನೆ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿರೋಡು–ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ ಅವೈಜ್ಞಾನಿಕ ಸರ್ಕಲ್ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.













