• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ಕುಟುಂಬ: ಕಾರು ಅಪಘಾತದಲ್ಲಿ ತಂದೆ-ಮಗ ಸಾವು

Any Mind by Any Mind
June 19, 2022
in ಕರ್ನಾಟಕ
0
ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ಕುಟುಂಬ: ಕಾರು ಅಪಘಾತದಲ್ಲಿ ತಂದೆ-ಮಗ ಸಾವು
Share on WhatsAppShare on FacebookShare on Telegram

ಮಗನಿಗೆ ಕೆಲಸ ಸಿಕ್ಕಿದ ಸಂಭ್ರಮದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಕುಟುಂಬ ಹಿಂತಿರುಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.

ADVERTISEMENT

ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ಗೇಟ್ ಬಳಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ನರಸಿಂಹರಾಜ್ (56) ಹಾಗೂ ಕಿರಣ್ (23) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ತಾಯಿ ಭಾರತಿ (52) ಹಾಗೂ ಪ್ರೇರಣಾ (19) ಸ್ಥಿತಿ ಗಂಭೀರವಾಗಿದೆ. ಪ್ರೇರಣಾಳ ಕೈ ಹಾಗೂ ಕಾಲಿನ ಮೂಳೆ ಮುರಿದು ಹೋಗಿದೆ ಎಂದು ಹೇಳಲಾಗಿದೆ. ಅವರಿಬ್ಬರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿರಣ್‍ಗೆ ಹೊಸದಾಗಿ ಕೆಲಸ ಸಿಕ್ಕಿದ್ದು, ಸೋಮವಾರ ಮೊದಲ ದಿನದ ಕೆಲಸಕ್ಕೆ ಹೋಗಬೇಕಿತ್ತು. ಈ ಹಿನ್ನೆಲೆ ನರಸಿಂಹರಾಜ್ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಮೃತರು ಮೂಲತಃ ಬೆಂಗಳೂರಿನ ರಾಜಾಜಿನಗರದವರು. ನಾಳೆಯಿಂದ ಮಗ ಕೆಲಸಕ್ಕೆ ಹೋಗುತ್ತಾನೆ ಎಂದು ನರಸಿಂಹರಾಜ್ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಬಂದಿದ್ದರು. ಪೂಜೆ ಮುಗಿಸಿಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

ಕಿರಣ್ ಸ್ಥಳದಲ್ಲೇ ಮೃತಪಟ್ಟರೆ ತಂದೆ ನರಸಿಂಹರಾಜ್ ಹಾಸನದ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಬೇಲೂರು ಬಳಿ ಅಸುನೀಗಿದ್ದಾರೆ. ಬಳಿಕ ಅವರ ಮೃತದೇಹವನ್ನು ಮೂಡಿಗೆರೆಗೆ ವಾಪಸ್ ತಂದಿದ್ದಾರೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೂಡಿಗೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ

Next Post

ಜನರಿಗೆ ಟೀ, ಬನ್ಸ್ ವಿತರಿಸುತ್ತಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗ!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಜನರಿಗೆ ಟೀ, ಬನ್ಸ್ ವಿತರಿಸುತ್ತಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗ!

ಜನರಿಗೆ ಟೀ, ಬನ್ಸ್ ವಿತರಿಸುತ್ತಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!