ಚಲಿಸುವ ವೇಳೆ ಕಾರಿನ ಟೈರ್ ಸ್ಪೋಟಗೊಂಡು ವಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮಗು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ತನ್ಮಯ್(3) ಮೃತದುರ್ದೈವಿ ಎಂದು ತಿಳಿದು ಬಂದಿದ್ದು ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೆಯಮ್ಮ, ಚಾಲಕ ವೆಂಕಟೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಗುವಿನ ಹುಟ್ಟಿದ ಹಬ್ಬದ ಪ್ರಯುಕ್ತ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ವಾಪಸ್ ಆಗುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
