
ಬೆಂಗಳೂರು: ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ ಬ್ಲಾಸ್ಟ್ ನಡೆದ ಪ್ರಕರಣ ಹಿನ್ನೆಲೆ ಬೆಂಗಳೂರಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ..
ದೆಹಲಿ ರೆಡ್ ಪೋರ್ಟ್ ಬಳಿ ನಡೆದ ಕಾರ್ ಸ್ಪೋಟದಲ್ಲಿ ಇದುವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಸ್ಟೋಟ ಉಗ್ರ ಕೃತ್ಯವೋ ಅಥವಾ ಆಕಸ್ಮಿಕ ಸ್ಪೋಟವೋ ಎಂಬುದು ಇದುವರೆಗೆ ಗೊತ್ತಾಗಿಲ್ಲ. ದೆಹಲಿಯಲ್ಲಿ ಈ ಘಟನೆ ನಡೆದಿದ್ರೂ ಮುನ್ನೆಚ್ಚರಿಕೆ ಕ್ರಮವಾಗಿ
ಬೆಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಇರುವಂತೆ ನಗರ ಪೊಲೀಸ್ ಆಯುಕ್ತರ ಸೂಚನೆ ನೀಡಿದ್ದಾರೆ

ನಗರದ ಮಾಲ್ ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖ ರಸ್ತೆಗಳು, ವೃತ್ತಗಳು, ಜಂಕ್ಷನ್ ಗಳಲ್ಲಿ ನಾಕಾಬಂಧಿ ಹಾಕಿ ರಾತ್ರಿಯಿಂದ ಪರಿಶೀಲನೆ ನಡೆಸಲಾಗ್ತಿದೆ.

ಆಯ ವಿಭಾಗದ ಡಿಸಿಪಿ ತಮ್ಮ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.. ರಾತ್ರಿ ಗಸ್ತು ತಿರುಗಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ನೇತೃತ್ವದಲ್ಲಿ ಪೊಲೀಸರು GT ಮಾಲ್ ನಲ್ಲಿ ಪರಿಶೀಲನೆ ನಡೆಸಿದ್ರೆ, ಬೆಂ.ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಎಂ ಹಾಕೆ ಮತ್ತು ಪೊಲೀಸ್ ಸಿಬ್ಬಂದಿ MG ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಮೇಟ್ರೋ ನಿಲ್ದಾಣ ಪರಿಶೀಲನೆ ನಡೆಸಿದ್ದಾರೆ. ಹಾಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಈಶಾನ್ಯ ವಿಭಾಗ ಡಿಸಿಪಿ ಸಜಿತ್ ಡಾಗ್ ಸ್ಕ್ವಾಡ್ ಹಾಗೆ ಬಾಂಬ್ ನಿಷ್ಕ್ರೀಯ ದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ಇದೇ ರೀತಿ ಪ್ರತಿ ವಿಭಾಗದಲ್ಲಿ ಅಧಿಕಾರಿಗಳು ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಿ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

