ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ ಬೆಟ್ಟ ಬಳಿ ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಹುಣಸೂರು ಕಡೆಯಿಂದ ಪಾಲಿಬೆಟ್ಟ ಗ್ರಾಮಕ್ಕೆ ತೆರಳುತ್ತಿದ್ದ ಬುಲೆರೋ ವಾಹನ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತಪಟ್ಟ 6 ಮಂದಿಯೂ ಪಾಲಿಬೆಟ್ಟ ಗ್ರಾಮದವರಾಗಿದ್ದು, ಬಂಧುಗಳ ಆಕ್ರಂದನ ಮುಗಿಲುಮುಟ್ಟಿತ್ತು.






