ಬೆಂಗಳೂರು: ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರೋ ಮೊಹ್ಮದ್ ನಲಪಾಡ್ ಮತ್ತೆ ಸುದ್ದಿಯಾಗಿದ್ದಾರೆ. ಪ್ರತಿಭಟನೆ ವೇಳೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆ ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹ್ಮದ್ ಹ್ಯಾರಿಸ್ ನಲಪಾಡ್ ಸೇರಿದಂತೆ 25 ಜನರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಅಡ್ಡಿ ಪಡಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಬಳಿ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ರಸ್ತೆ ತಡೆ ಮಾಡಿ ಪಂಜಿನ ಮೆರವಣಿ ನಡೆಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಲಪಾಡ್ ಸೇರಿದಂತೆ 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪ, ಮೈಕ್ ಮೂಲಕ ಅನ್ಸೌಮೆಂಟ್, ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ದೂರು ದಾಖಲಾಗಿದೆ. ಹೈಗ್ರೌಂಡ್ ಠಾಣೆಯ ಇನ್ಸ್ಪೆಕ್ಟರ್ ಭರತ್ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ನಲ್ಲಿ ನಲಪಾಡ್ ಮೊದಲನೇ ಆರೋಪಿಯಾಗಿದ್ದಾರೆ.ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಮೊಹಮ್ಮದ್ ನಲಪಾಡ್ ಆರೋಪಿಯಾಗಿದ್ದರು.ಪ್ರಮುಖವಾಗಿ ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಎಂಬುವರ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.