ಬೆಂಗಳೂರು: ಜಾತಿ ನಿಂದನೆ ಕೇಸ್ನಲ್ಲಿ ಶಾಸಕ ಮುನಿರತ್ನ (MLA Munirathna in caste abuse case)ಅವರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಈ ನಡುವೆ ಭಾರೀ ಕೋಲಾಹಲ ಸೃಷ್ಠಿಸಿದ ಶಾಸಕರ ವೈರಲ್ ಹೇಳಿಕೆಯ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಬಿಜೆಪಿಯ ಶಿಸ್ತು ಸಮಿತಿ Disciplinary committee of BJP )ಮುನಿರತ್ನ ಅವರಿಗೆ ಶೋಕಾಸ್ ನೋಟಿಸ್ Notice)ನೀಡಿದೆ.
ಈ ಬಗ್ಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಮುನಿರತ್ನ ಅವರಿಗೆ ನೋಟಿಸ್ ಕಳುಹಿಸಿದ್ದಾರೆ.ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಳ್ಳುತ್ತಿರುವಂತೆ ನೀವು ಅವಹೇಳನಕಾರಿಯಾಗಿ ಮಾತನಾಡಿರುವಂತೆ ಪ್ರಸರಣಗೊಳ್ಳುತ್ತಿದೆ.ಇದಕ್ಕೆ ಕುರಿತಂತೆ ತಮ್ಮ ಮೇಲೆ ಎಫ್ಐಆರ್ ಕೂಡಾ ದಾಖಲಾಗಿದೆ ಈ ತರಹದ ಘಟನೆ ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ.
ಆದ್ದರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ 5 ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡಬೇಕೆಂದು ನೋಟಿಸ್ ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಗುತ್ತಿಗೆದಾರ ಚಲುವರಾಜ ಎಂಬುವವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಅವರನ್ನು ಪೊಲೀಸರು ಕೋಲಾರದ ನಂಗಲಿ ಗ್ರಾಮದಲ್ಲಿ ಅರೆಸ್ಟ್ ಮಾಡಿದ್ದಾರೆ.