• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ:ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮುಡಾ ಹಗರಣದಿಂದ (Muda scam)ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ(Minister HD Kumaraswamy) ಅವರು ದೂರಿದ್ದಾರೆ.

ADVERTISEMENT

ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ.

ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು.ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಈಗ ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ.ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದರು.

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ.ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು; ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬಹುದಲ್ಲವೆ? ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು.ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ಅವರು ದೂರಿದರು.

Tags: Caste census dramaCM Siddaramaiah‌Congress PartyHD Kumaraswamy direct accusationMuda scam:ಜೆಡಿಎಸ್
Previous Post

ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ:ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ

Next Post

ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ ಫಿಕ್ಸ್:ಸಿಎಂ ಸಿದ್ಧರಾಮಯ್ಯ

Related Posts

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು
ಕರ್ನಾಟಕ

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

by ಪ್ರತಿಧ್ವನಿ
April 28, 2026
0

ಬೆಂಗಳೂರು ನಗರದ ಹೃದಯಭಾಗದ ಕಬ್ಬನ್ ಪಾರ್ಕ್ ಸಮೀಪ ಸಂಭವಿಸಿದ ವ್ಯಕ್ತಿಯ ನಿಗೂಢ ಸಾವು ಆರಂಭದಲ್ಲಿ ಆತ್ಮಹತ್ಯೆ ಎಂದು ಶಂಕಿಸಲ್ಪಟ್ಟಿದ್ದರೂ, ಪೊಲೀಸರ ಆಳವಾದ ತನಿಖೆಯಲ್ಲಿ ಆಘಾತಕಾರಿ ಸತ್ಯಗಳು ಬೆಳಕಿಗೆ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post

ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ ಫಿಕ್ಸ್:ಸಿಎಂ ಸಿದ್ಧರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada