ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿವರದಿ (Caste census) ವಾರ್ ಜೋರಾಗಿದೆ. ಜಾತಿ ಗಣತಿ ವರದಿಗೆ ಆಡಳಿತಾರೂಢ ಪಕ್ಷದವರಿಂದಲೇ ಹೆಚ್ಚು ವಿರೋಧ ವ್ಯಕ್ತವಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ (Cabinet meeting) ಮುಚ್ಚಿದ ಲಕೋಟೆಯಲ್ಲಿರುವ ಜಾತಿ ಗಣತಿ ವರದಿ ತೆರೆಯಲು ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ (Vinay kulkarni) ವಿರೋಧ ವ್ಯಕ್ತಪಡಿಸಿದ್ದಾರೆ.
ಈಗ ಸರ್ಕಾರದ ಕೈ ಸೇರಿರುವ ವರದಿ ವೈಜ್ಞಾನಿಕವಾಗಿಲ್ಲ. ಹೀಗಾಗಿ ಜಾತಿ ಗಣತಿ ಮರು ಸಮೀಕ್ಷೆ ನಡೆಯಬೇಕು ಎಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಒತ್ತಾಯಿಸಿದ್ದಾರೆ. ಮತ್ತೊಂದೆಡೆ ಜಾತಿಗಣತಿ ಪರವಾಗಿದ್ದೇನೆ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ (Ramesh jarakiholi) ಹೇಳಿದ್ದಾರೆ.
ಹೀಗಾಗಿ ಜಾತಿಗಣತಿ ವರದಿ ಜಾರಿಗೆ ತರುವ ವಿಚಾರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದ್ದು, ಮುಂದಿನ ಸಂಪುಟ ಸಭೆ ಕುತೂಹಲಕ್ಕೆ ಕಾರಣವಾಗಿದೆ.