ಬೆಂಗಳೂರು: ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕಳೆದ ಅಕ್ಟೋಬರ್ 27 ರಂದು ಎಂಎಲ್ ಸಿ. ಸಿ.ಟಿ.ರವಿ ಚಿಕ್ಕಮಗಳೂರು ಮೆಡಿಕಲ್ ಕಾಲೇಜ್ ಗೆ ಭೇಟಿ ನೀಡಿದ್ದಾಗ ಫೋನ್ ನಲ್ಲಿ ಪ್ರಾಂಶುಪಾಲರ ಉದ್ದೇಶಿಸಿ ಸವಿತಾ ಸಮಾಜ ಅವಹೇಳನ ಮಾಡುವ ರೀತಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಸೋಷಿಯಲ್ ಮೀಡಿಯಾಗಳಲ್ಲಿ ಈ ವಿಡಿಯೋ ವೈರಲ್ ಆಗಿ ಸವಿತಾ ಸಮಾಜದ ಕೆಂಗಣ್ಣಿಗೆ ಗುರಿಯಾಗಿತ್ತು.

ಸದ್ಯ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದರು. ಈ ಬಗ್ಗೆ ಕಾಂಗ್ರೆಸ್ ಬೆಂ. ದಕ್ಷಿಣ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮುಖಂಡ ಮುರುಗೇಶ್ ಮೊದಲಿಯಾರ್ ಮಡಿವಾಳ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು BNS ಸೆಕ್ಷನ್ 196,299,352 ಅಡಿ ಸಿಟಿ.ರವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿರುವುದರಿಂದ ಪೊಲೀಸರು ಸದ್ಯಕ್ಕೆ ಶೂನ್ಯ ಎಫ್ ಐಆರ್ ಮಾಡಿ ನಂತರ ಕೇಸ್ ವರ್ಗಾವಣೆ ಮಾಡಲಿದ್ದಾರೆ












