ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ತಮಿಳುನಾಡು ಏಜೆಂಟರಂತೆ ವರ್ತಿಸಬಾರದು ಎಂಬುದು ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ತಿಳಿದಿರಬೇಕು. ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಬೇಕು. ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ನೀರಿಲ್ಲ ಮತ್ತು ಕುಡಿಯುವ ಉದ್ದೇಶಕ್ಕೂ ಇರುವ ನೀರು ನಮಗೆ ಸಾಕಾಗುತ್ತಿಲ್ಲ. ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದ್ದು, ಅವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಮತ್ತು ಜನಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿರುವುದರಿಂದ ಕರ್ನಾಟಕವು ಬಿಕ್ಕಟ್ಟು ಎದುರಿಸುತ್ತಿದೆ ಎಂದು ದೂರಿದರು.