Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ: ಡಿ.ಕೆ. ಶಿವಕುಮಾರ್ ಆರೋಪ

ಪ್ರತಿಧ್ವನಿ

ಪ್ರತಿಧ್ವನಿ

September 23, 2023
Share on FacebookShare on Twitter

ಬೆಂಗಳೂರು: “ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಆದರೂ ವಿರೋಧ ಪಕ್ಷಗಳು ಕಾವೇರಿ ಸಮಸ್ಯೆಗೆ ರಾಜಕೀಯ ಆಯಾಮ ನೀಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

Bank: 18 ಕೋಟಿ ರೂಪಾಯಿ ದರೋಡೆ

“ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಬಂದ್ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಯಾರೊಬ್ಬರೂ ಕಾನೂನು ಕೈಗೆ ಎತ್ತಿಕೊಳ್ಳಬಾರದು. ನಾವು ನಮ್ಮ ರಾಜ್ಯದ ಹಿತ ಕಾಯುತ್ತಿದ್ದೇವೆ. ಹೋರಾಟ ಮಾಡಬಾರದು ಎಂದು ನಾವು ಹೇಳುವುದಿಲ್ಲ. ರೈತ ಸಂಘಟನೆ, ಕನ್ನಡ ಸಂಘಟನೆಗಳು, ಚಿತ್ರರಂಗ, ವಿರೋಧ ಪಕ್ಷಗಳ ಹೋರಾಟಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಆದರೆ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದು”

ಇಂತಹ ಸಂಕಷ್ಟದ ಸಂದರ್ಭದಲ್ಲಿ ವಿರೋಧ ಪಕ್ಷಗಳು ನಿಮ್ಮ ಜೊತೆ ನಿಲ್ಲಬೇಕಿತ್ತಲ್ಲವೆ ಎಂದು ಕೇಳಿದಾಗ, “ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವರು ಹೊಸ ಹುರುಪಿನಲ್ಲಿ ಅವರದೇ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅವರು ನೀರಿನಲ್ಲಿ ರಾಜಕಾರಣ ಮಾಡಿದರೆ, ನಾವು ರೈತರನ್ನು ಕಾಪಾಡುತ್ತಿದ್ದೇವೆ. ರಾಜ್ಯದ ಹಿರಿಯ ನಾಯಕರಾದ ದೇವೇಗೌಡರು ಎಕನಾಮಿಕ್ ಟೈಮ್ಸ್ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ಯಾವ ಸಲಹೆ ಕೊಟ್ಟಿದ್ದಾರೆ ಎಂದು ನೀವೇ ಹೇಳಿ. ನಾನು ಏನಾದರೂ ಹೇಳಿದರೆ ಅದು ರಾಜಕಾರಣ ಆಗುತ್ತದೆ. ನೀವು ಈ ಸಂದರ್ಶನ, ಅದರಲ್ಲಿ ದೇವೇಗೌಡರು ಏನು ಹೇಳಿದ್ದಾರೆ ಎಂಬುದನ್ನು ನೋಡಿದರೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ” ಎಂದು ತಿಳಿಸಿದರು.

ಕಾವೇರಿ ಕರ್ನಾಟಕದ ಆಸ್ತಿ ಅಲ್ಲ ಎಂಬ ಡಿಎಂಕೆ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಹೌದು ಕಾವೇರಿ ಇಡೀ ದಕ್ಷಿಣ ಭಾರತದ ಆಸ್ತಿ” ಎಂದು ತಿಳಿಸಿದರು. ಅಮಿತ್ ಶಾ ಮೈತ್ರಿ ಚರ್ಚೆಗೆ ಕಾಲಾವಕಾಶ ನೀಡುತ್ತಾರೆ, ಸರ್ಕಾರಕ್ಕೆ ಭೇಟಿ ಅವಕಾಶ ನೀಡುವುದಿಲ್ಲವಲ್ಲ ಎಂದು ಕೇಳಿದಾಗ, “ಕುಮಾರಸ್ವಾಮಿ ಅವರು ಕಾವೇರಿ ವಿಚಾರವಾಗಿ ಚರ್ಚೆ ಮಾಡಿದ್ದೇವೆ ಎಂದು ಹೇಳಿರುವ ಬಗ್ಗೆ ವರದಿ ಬಂದಿದೆ. ಅವರು ಏನು ಚರ್ಚೆ ಮಾಡಿದ್ದಾರೆ, ಅವರ ನುಡಿಮುತ್ತು ಏನು ಎಂದು ಹೇಳಿದರೆ ನಾವು ಕೇಳುತ್ತೇವೆ” ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರು ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವೇನೂ ಮೂರ್ಖರೇ? ರಾಜ್ಯದ ಹಾಗೂ ಎಲ್ಲಾ ರೈತರ ರಕ್ಷಣೆ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ಬೆಂಗಳೂರು ಬಂದ್ ಗೆ ಕರೆ ನೀಡಿರುವ ಬಗ್ಗೆ ಕೇಳಿದಾಗ, “ಬೆಂಗಳೂರಿನ ಘನತೆಗೆ ಧಕ್ಕೆ ಮಾಡಿದರೆ ನಿಮ್ಮ ಹೃದಯಕ್ಕೆ ನೀವೇ ಚುಚ್ಚಿಕೊಂಡಂತೆ. ನಾವು ಎಲ್ಲಾ ರೀತಿಯಲ್ಲಿ ರೈತರ ಹಿತ ಕಾಯುತ್ತಿದ್ದೇವೆ. ಈ ಬಂದ್ ನಿಂದ ಅವರಿಗೆ ಏನು ಲಾಭ? ಲಾಭ ಆಗುವುದಿದ್ದರೆ ಮಾಡಲಿ. ನಿಮ್ಮ ಪರವಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ದಯಮಾಡಿ ಬಂದ್ ನಂತಹ ತಪ್ಪು ಮಾಡಬೇಡಿ” ಎಂದು ತಿಳಿಸಿದರು.

ಇಂಡಿಯಾ ಒಕ್ಕೂಟದಲ್ಲಿ ಸೋನಿಯಾ ಗಾಂಧಿ ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಳಿದಾಗ, “ಪ್ರಧಾನಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ. ಸಿ. ಟಿ ರವಿ ಅವರಿಗೆ ಎಲ್ಲೂ ಜಾಗ ಇಲ್ಲ. ಅದಕ್ಕೆ ಹೋರಾಟ ಮಾಡಿ ಮಂಡ್ಯದಲ್ಲಿ ಏನಾದರೂ ಜಾಗ ಸಿಗುತ್ತಾ ಎಂದು ನೋಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2
ಅಂಕಣ

ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2

by Prathidhvani
December 2, 2023
ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!
Top Story

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

by ಪ್ರತಿಧ್ವನಿ
December 2, 2023
ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ
ಅಂಕಣ

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

by Prathidhvani
November 27, 2023
BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ
Top Story

BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ

by Prathidhvani
December 1, 2023
ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Uncategorized

ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಸಿಎಂ ಸಿದ್ದರಾಮಯ್ಯ

by Prathidhvani
November 26, 2023
Next Post
ಡಿಜಿ, ಐಜಿಪಿ ನಡೆಸುತ್ತಿದ್ದ ಸಭೆಗಳ ಹೊಣೆ ಇನ್ನು ಎಡಿಜಿಪಿ, ಐಜಿಪಿ ರ‍್ಯಾಂಕ್ ಅಧಿಕಾರಿಗಳ ಹೆಗಲಿಗೆ..!

ಡಿಜಿ, ಐಜಿಪಿ ನಡೆಸುತ್ತಿದ್ದ ಸಭೆಗಳ ಹೊಣೆ ಇನ್ನು ಎಡಿಜಿಪಿ, ಐಜಿಪಿ ರ‍್ಯಾಂಕ್ ಅಧಿಕಾರಿಗಳ ಹೆಗಲಿಗೆ..!

ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಡಿಕೆ ಶಿವಕುಮಾರ್‌

ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಡಿಕೆ ಶಿವಕುಮಾರ್‌

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಬೃಹತ್ ಪ್ರತಿಭಟನೆ; ನಾಯಕರ ಬಂಧನ ಬಿಡುಗಡೆ

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಬೃಹತ್ ಪ್ರತಿಭಟನೆ; ನಾಯಕರ ಬಂಧನ ಬಿಡುಗಡೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist