ನವದೆಹಲಿ: ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದಲ್ಲಿ 161 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು, ಈ ಪೈಕಿ ಕಾವೇರಿ ಜಲಾನಯನ ಪ್ರದೇಶದಲ್ಲಿಯೇ 32 ಜಿಲ್ಲೆಗಳಿವೆ ಎಂದು ಕರ್ನಾಟಕದ ಅಧಿಕಾರಿಗಳು ಕಾವೇರಿ ನೀರಿ ನಿಯಂತ್ರಣ ಸಮಿತಿ ಮುಂದೆ ವಾದ ಮಂಡನೆ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಕಾವೇರಿ ನೀರಿ ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ ಮಾಡಿದ್ದಾರೆ. ಈ ವೇಳೆ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಸಮಿತಿಯ ಮುಂದೆ ಇಡುವ ಪ್ರಯತ್ನ ಮಾಡಿದ್ದಾರೆ. ಸೆ.25ರವರೆಗೆ ಕರ್ನಾಟಕದ ಕಾವೇರಿ ಜಲಾನಯನ ವ್ಯಾಪ್ತಿಗೊಳಪಡುವ 4 ಜಲಾಶಯಗಳಿಗೆ ಶೇ.53.04 ಪರ್ಸೆಂಟ್ ಒಳ ಹರಿವಿನ ಕೊರತೆಯಾಗಿದೆ. ಕರ್ನಾಟಕ ಸರ್ಕಾರವು ಕಳೆದ ಸೆ.13ರಂದು ರಾಜ್ಯದ 161 ತಾಲೂಕುಗಳನ್ನು ಬರ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ ಎಂದು ವಾದ ಮಂಡಿಸಲಾಗಿದೆ.

