• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ನೀರು ವಿವಾದ.. ನೀರು ಬಿಡಿ ಅಷ್ಟೇ..

ಪ್ರತಿಧ್ವನಿ by ಪ್ರತಿಧ್ವನಿ
September 21, 2023
in Top Story, ಕರ್ನಾಟಕ, ದೇಶ
0
ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ನೀರು ವಿವಾದ.. ನೀರು ಬಿಡಿ ಅಷ್ಟೇ..
Share on WhatsAppShare on FacebookShare on Telegram

ಕರ್ನಾಟಕಕ್ಕೆ ಕಾವೇರಿ ವಿಚಾರದಲ್ಲಿ ಮತ್ತೆ ಸುಪ್ರೀಂಕೋರ್ಟ್​ನಲ್ಲೂ ಹಿನ್ನಡೆ ಆಗಿದೆ. ಪ್ರತಿದಿನ ಸುಯಮಾರು 6,400 ಕ್ಯೂಸೆಕ್​ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಬೇಕು ಎಂದು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್​ ರೊಹ್ಟಗಿ ಸುಪ್ರೀಂಕೋರ್ಟ್ ವಾದ ಮಂಡನೆ ಮಾಡಿದ್ದಾರೆ. ಆದರೆ ಅಷ್ಟು ಪ್ರಮಾಣದ ನೀರು ಬಿಡುಗಡೆ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಮಳೆಯಾಗಿಲ್ಲ, ಜಲಾಶಯದಲ್ಲಿ ನೀರಿಲ್ಲ. ಸಂಕಷ್ಟದ ಸಮಯದಲ್ಲೂ CWMA ನೀಡಿದ್ದ ಸೂಚನೆಯನ್ನು ಪಾಲಿಸಿದ್ದೇವೆ. ಸದ್ಯದ ನೀರಿನ ಲಭ್ಯತೆ ಆಧಾರದಲ್ಲಿ ಕರ್ನಾಟಕ 2600 ಕ್ಯೂಸೆಕ್ ನೀರು ಬಿಡಲು ಸಾಧ್ಯವಿದೆ ಅಂತಾ ಸುಪ್ರೀಂಕೋರ್ಟ್ ಗೆ ತಿಳಿಸಿದ ಕರ್ನಾಟಕ ಪರ ವಕೀಲ ಶ್ಯಾಮ್​ ದಿವಾನ್​.

ADVERTISEMENT

CWMA ಆದೇಶಕ್ಕೆ ಮಧ್ಯಪ್ರವೇಶ ಮಾಡಲ್ಲ ಎಂದ ಸುಪ್ರೀಂ

ಪ್ರತಿದಿನ 12, 500 ಕ್ಯೂಸೆಕ್​ ನೀರು ಬಿಡಬೇಕಿರುವ ಕರ್ನಾಟಕ, ತಮಿಳುನಾಡಿದೆ 1200 ಕ್ಯೂಸೆಕ್​ ನೀರು ಹರಿಸುತ್ತಿದೆ ಇದು ಯಾವ ನ್ಯಾಯ ಎಂದು ತಮಿಳುನಾಡು ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡಲು ಯಶಸ್ವಿಯಾಗಿದೆ. CWMA ಆದೇಶ ಮಾಡಿದಷ್ಟೂ ನೀರನ್ನು ಬಿಡುತ್ತಿಲ್ಲ ಎಂದು ಗಮನಸೆಳೆಯುವ ವಾದವನ್ನು ಮಾನ್ಯ ಮಾಡಿದ ಸುಪ್ರೀಂಕೋರ್ಟ್​, ಅಂತಿಮವಾಗಿ ಯಥಾಸ್ಥಿತಿ ಕಾಯ್ದುಕೊಳ್ಳುವ ಮೂಲಕ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.. ಮುಂದಿನ ಎರಡು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಹೇಳಿರುವ ಸುಪ್ರೀಂಕೋರ್ಟ್, ಹದಿನೈದು ದಿನಗಳ ಬಳಿಕ ಮತ್ತೆ ಸಭೆ ನಡೆಸುವಂತೆ CWMAಗೂ ಸೂಚನೆ ನೀಡಿದೆ.

ಕರ್ನಾಟಕ ಕಂಗಾಲು ದೆಹಲಿಯಲ್ಲಿ ತುರ್ತು ಸಭೆ.. ಮುಂದೇನು..?

CWMA ಆದೇಶದ ಪ್ರಕಾರ ಕರ್ನಾಟಕದಿಂದ ತಮಿಳುನಾಡಿಗೆ ಸದ್ಯ 4,500 ಕ್ಯೂಸೆಕ್ ನೀರು ಹರಿಸಲಾಗ್ತಿದೆ. ಆದರೂ ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಪದೇ ಪದೇ ಅನ್ಯಾಯ ಆಗುತ್ತಿದ್ದು, ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಜಲಸಂಪನ್ಮೂಲ ಖಾತೆ ಸಚಿವ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹಾದೇವಪ್ಪ , ಚೆಲುವರಾಯಸ್ವಾಮಿ, ನವದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಭೆಯಲ್ಲಿ ಉಪಸ್ಥಿತರಿದ್ದು, ಸುಪ್ರೀಂಕೋರ್ಟ್​ ಆದೇಶವನ್ನ ಪಾಲಿಸಬೇಕೆ ಅಥವಾ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೆಎನ್ನುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಕರ್ನಾಟಕದ ಪರಿಸ್ಥಿತಿ ಪರಿಶೀಲನೆ ಮಾಡದೆ ಆದೇಶ ಹೇಗೆ..?

ಕಾವೇರಿ ನಿಯಂತ್ರಣ ಆಯೋಗ ಹಾಗು ಕಾವೇರಿ ನಿರ್ವಹಣಾ ಪ್ರಾಧಿಕಾರದ ಶಿಫಾರಸುಗಳು ಮತ್ತು ಆದೇಶಗಳ ವಿರುದ್ಧದ ಮಧ್ಯಂತರ ಅರ್ಜಿಗಳ ಮೇಲೆ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಣೆ ಮಾಡಿದೆ. ಇದೇ ವೇಳೆ ಸಂಕಷ್ಟ ಸೂತ್ರದ ಅಗತ್ಯತೆ ಬಗ್ಗೆ ವಕೀಲ ದುಷ್ಯಂತ ದವೇ ಪ್ರಸ್ತಾಪಿಸಿದ್ದಾರೆ. ಸುಪ್ರೀಂಕೋರ್ಟ್​ನಲ್ಲಿ ರೈತರ ಪರ ದವೇ ವಾದ ಮಂಡಿಸಿದ್ದು, ಕರ್ನಾಟಕದಲ್ಲಿ ಮಳೆಯಿಲ್ಲದೆ ಸಂಕಷ್ಟ ಎದುರಾಗಿದೆ ಎಂದು ಅರ್ಥ ಮಾಡಿಸಲು ಯತ್ನಿಸಿದ್ದಾರೆ. ಆದರೆ ಸಂಕಷ್ಟ ಪರಿಶೀಲನೆಗೆ ತಜ್ಞರ ಸಮಿತಿ ಇದೆಯಲ್ಲ ಎಂದಿದ್ದಾರೆ ನ್ಯಾಯಮೂರ್ತಿ ಬಿ ಆರ್ ಗವಾಯಿ. ಸದ್ಯದ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಲು ತಜ್ಞರು ಬರಬೇಕು ಎಂದ ವಕೀಲ ಮೋಹನ್ ಕಾತರಕಿ ಮನವಿ ಮಾಡಿಕೊಂಡಿದ್ದಾರೆ. ಆದರೂ ಕರ್ನಾಟಕಕ್ಕೆ ಮಾತ್ರ ಬರೆ ಮೇಲೆ ಬರೆ ಬೀಳುತ್ತಿರುವುದು ಮಾತ್ರ ಸುಳ್ಳಲ್ಲ.

ಕೃಷ್ಣಮಣಿ

Tags: Cauvery waterKarnatakaNewssupreme courtTamilnadu
Previous Post

ಕಾರ್ಯಾಚರಣೆಯ ಕಾರಣಗಳಿಂದ ಕೆನಡಾದಲ್ಲಿನ ವೀಸಾ ಸೇವೆಗಳು ಸ್ಥಗಿತ

Next Post

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ; ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

Related Posts

Top Story

by ಪ್ರತಿಧ್ವನಿ
November 3, 2025
0

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳ ವಿರುದ್ಧ ದೋಷಾರೋಪನೆ ನಿಗದಿ ಪಡಿಸುವುದನ್ನು ನಗರದ 64ನೇ ...

Read moreDetails
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025
Next Post
ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ;  ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ; ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

Please login to join discussion

Recent News

Top Story

by ಪ್ರತಿಧ್ವನಿ
November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!
Top Story

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

by ಪ್ರತಿಧ್ವನಿ
November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!