• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು: ಡಿ.ಕೆ.ಶಿವಕುಮಾರ್

Any Mind by Any Mind
March 4, 2024
in Top Story, ಕರ್ನಾಟಕ
0
110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು: ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು (Bengaluru): 110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.

ADVERTISEMENT

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 775 ಎಂಎಲ್ ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು. ನಿಷ್ಕ್ರಿಯವಾಗಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ನಾಗರಿಕರು ಸಹ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಭೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದಿದ್ದಾರೆ.‌

ನಗರದಲ್ಲಿವೆ 15 ಸಾವಿರ ಕೊಳವೆ ಬಾವಿಗಳು

ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ.

ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು ಇದನ್ನು ಶೀಘ್ರ ಬಗೆಹರಿಸಲಾಗುವುದು.

ನೀರು ಪೂರೈಕೆಗೆ ಹಾಲಿನ ಟ್ಯಾಂಕರ್‌‌ ಗಳು

ನಿರುಪಯುಕ್ತ ಹಾಲಿನ ಟ್ಯಾಂಕರ್ ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಳಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್ ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸಬೇಕು ಎಂದು ಸೂಚಿಸಲಾಗಿದೆ.

ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಟ್ಯಾಂಕರ್ ದರ ನಿಗದಿ ವಿಚಾರವಾಗಿ ಮಾ. 7 ರಂದು ಟ್ಯಾಂಕರ್ ನೀರು ಪೂರೈಕೆ ಮಾಲೀಕರ ಸಭೆ ಇದ್ದು, ಅಂದು ದರ ನಿಗದಿ ಮಾಡಲಾಗುವುದು ಎಂದು ಹೇಳಿದರು.

ಕಾವೇರಿ 5 ನೇ ಹಂತಕ್ಕೆ ತೊಡಕು ಉಂಟಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2  ಕಿಮೀ ನಷ್ಟು ಸಮಸ್ಯೆ ಇದೆ. ಅರಣ್ಯ ಭೂಮಿ ಮತ್ತು ಒಂದು ಕಡೆ ಕಲ್ಲು ಅಡ್ಡ ಬಂದಿರುವ ಕಾರಣ ಸಮಸ್ಯೆ ಉಂಟಾಗಿದೆ. ಶೀಘ್ರ ಈ ತೊಡಕು ನಿವಾರಣೆಯಾಗುವುದು. ಮೇ ಅತ್ಯಂತ ವೇಳೆಗೆ ಪೂರೈಕೆಯಾಗುವುದು ಎಂದು ತಿಳಿಸಿದರು.

#karnataka #bengaluru #water #waterproblem #dkshivakumar 

Previous Post

ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್ ‌ಗಳು ಸೀಜ್: ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು; ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಪಾಕ್ ಪರ ಘೋಷಣೆ ಪ್ರಕರಣ ಆರೋಪಿಗಳ ಬಂಧನದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ಇಲ್ಲವಂತೆ !

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಪಾಕ್ ಪರ ಘೋಷಣೆ ಪ್ರಕರಣ ಆರೋಪಿಗಳ ಬಂಧನದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ಇಲ್ಲವಂತೆ !

ಪಾಕ್ ಪರ ಘೋಷಣೆ ಪ್ರಕರಣ ಆರೋಪಿಗಳ ಬಂಧನದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ಇಲ್ಲವಂತೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada