ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ವಿರುದ್ದ ಕೇಳಿ ಬಂದಿದ್ದ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ತೀರ್ಪು ನೀಡಿದ್ದು, ಲಾಲು ಅವರನ್ನು ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದೆ.
ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18ರಂದು ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ. ಜನವರಿ 29ರಂದು ವಿಚಾರಣೆ ನಡೆಸಿ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಲಾಲು ಈ ಹಿಂದೆ ನಾಲ್ಕು ಬಹುಕೋಟಿ ಮೇವಿನ ಹಗರಣಗಳಲ್ಲಿ 14 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು.
ಈ ಹಿಂದೆ ಲಾಲು ಮುಖ್ಯಮಂತ್ರಿಯಾಗಿದಂತಹ ಸಮಯದಲ್ಲಿ ಬಹುಕೋಟಿ ಹಗರಣಗಳ ಆರೋಪಗಳು ಕೇಳಿ ಬಂದಿದ್ದವು. ಈ ಪ್ರಕರಣಗಳ ವಿರುದ್ದ ತನಿಖೆ ನಡೆಸಲು ಬಿಹಾರ ಸರ್ಕಾರ ಸಿಬಿಐಗೆ ವಹಿಸಿತ್ತು.