• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧಾರ!

Any Mind by Any Mind
November 23, 2023
in ಕರ್ನಾಟಕ
0
ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧಾರ!
Share on WhatsAppShare on FacebookShare on Telegram

ADVERTISEMENT

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ದಾಖಲಾಗಿರುವ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದೆ.

ಸಿಬಿಐ ತನಿಖೆಗೆ ಕಾನೂನು ಪ್ರಕಾರ ಅನುಮತಿ ನೀಡಲಾಗಿಲ್ಲ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆ ಹಿಂಪಡೆಯಲು ತೀರ್ಮಾನಿಸಲಾಗಿದೆ.

ತಮ್ಮದೇ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆಯುವ ನಿರ್ಧಾರ ಕೈಗೊಳ್ಳುತ್ತಿರುವ ಕಾರಣ ಉಪ ಮುಖ್ಯಮಂತ್ರಿ ಡಿಕೆಶಿವಕುಮಾರ್‌ ಅವರು ಸಂಪುಟ ಸಭೆಗೆ ಗೈರಾಗಿದ್ದರು.

೭೪ ಕೋಟಿ ರೂಪಾಯಿ ಮೊತ್ತದಷ್ಟು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಡಿ ಜಾರಿ ನಿರ್ದೇಶನಾಲಯದ ಆರೋಪಪಟ್ಟಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು.

ರಾಜ್ಯ ಸರ್ಕಾರದ ಒಪ್ಪಿಗೆ ಅನಿವಾರ್ಯ:

ದೆಹಲಿ ಪೊಲೀಸ್‌ ಸ್ಥಾಪನಾ ಕಾಯ್ದೆಯ ಪ್ರಕಾರ ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಅನಿವಾರ್ಯ. ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ೨೦೧೯ರಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಾಗಿತ್ತು.


ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಬಹುದು ಎಂದು ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್‌ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. 

ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಡಿಕೆಶಿ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ ಏಕಸದಸ್ಯ ಪೀಠ ಡಿಕೆಶಿ ಅರ್ಜಿ ವಜಾಗೊಳಿಸಿ ಸಿಬಿಐ ತನಿಖೆಗೆ ಅನುಮತಿಸಿತ್ತು.

ಆದರೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಕೆಶಿ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಸಿಬಿಐ ತನಿಖೆಗೆ ತಡೆ ನೀಡಿತ್ತು. 
ನವೆಂಬರ್‌ ೨೯ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿರುವ ಹೊತ್ತಲ್ಲೇ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿಯನ್ನು ವಾಪಸ್‌ ಪಡೆದಿದೆ.


ತನಿಖೆ ಬಹುತೇಕ ಮುಗಿದಿದೆ ಎಂದಿರುವ ಸಿಬಿಐ:
ಸುಪ್ರೀಂಕೋರ್ಟ್‌ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆಯ ಪ್ರಕರಣದ ತನಿಖೆಗೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ ಎಂದು ಸಿಬಿಐ ಹೇಳಿತ್ತು.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ, ತೆಲಂಗಾಣದ ಜನ ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ : ಜೆಪಿ ನಡ್ಡಾ

Next Post

ಅಧಿಕಾರ ರಾಜಕಾರಣದ ಸಾಂವಿಧಾನಿಕ ಸವಾಲುಗಳು – ನಾ ದಿವಾಕರ ಅವರ ಬರಹ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಅಧಿಕಾರ ರಾಜಕಾರಣದ ಸಾಂವಿಧಾನಿಕ ಸವಾಲುಗಳು – ನಾ ದಿವಾಕರ ಅವರ ಬರಹ

ಅಧಿಕಾರ ರಾಜಕಾರಣದ ಸಾಂವಿಧಾನಿಕ ಸವಾಲುಗಳು - ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada