ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆಯ ವಿರುದ್ಧ ರಾಜ್ಯ ಸರ್ಕಾರದ ಶಾಸಕರು,ಸಚಿವರು ಖುದ್ದು ಮುಖ್ಯಮಂತ್ರಿ ಹಾದಿಯಾಗಿ ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳಾಗಿರುವ ಇಡಿ (ED & CBI) ಮತ್ತು ಸಿಬಿಐ ಕೇಂದ್ರ ಸರ್ಕಾರದ ಕೈ ಗೊಂಬೆಯಂತೆ ವರ್ತಿಸುತ್ತಿದೆ. ಪೂರ್ವಗ್ರಹ ಪೀಡಿತವಾಗಿ ಈ ತನಿಖಾ ಸಂಸ್ಥೆಗಳು ಹಗರಣದ ತನಿಖೆ ಕೈಗೊಂಡಿದ್ದು, ರಾಜ್ಯ ಸರ್ಕಾರದ ಸಚಿವರು ಶಾಸಕರು ಮುಖ್ಯಮಂತ್ರಿಗಳನ್ನ ಹಗರಣದಲ್ಲಿ ಸಿಲುಕಿಸಲು ಆರೋಪಿಗಳ ಬಳಿ ಒತ್ತಾಯ ಪೂರ್ವಕವಾಗಿ ಹೇಳಿಕೆ ಕೊಡಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಸೇರಿದ ಹಾಗೆ ಕಾಂಗ್ರೆಸ್ನ ಹಲವು ಶಾಸಕರು ಮತ್ತು ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಇಡಿ ಮತ್ತು ಸಿಬಿಐ ತನಿಖಾ ವೈಖರಿಯನ್ನ ವಿರೋಧಿಸಿ ಪ್ರತಿಭಟಿಸಿದ್ದಾರೆ.