ಮನೀಶ್ ಸಿಸೋಡಿಯಾ ಮೇಲಿನ ಸಿಬಿಐ-ಇಡಿ ದಾಳಿಗಳು ನಮ್ಮ ಎಎಪಿ ಸರ್ಕಾರವನ್ನು ಉರುಳಿಸಲು ನಡೆಸಿದ ಪ್ರಯತ್ನಗಳಾಗಿವೆ. ಆದರೆ ಇಲ್ಲಿ ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ಎಎಪಿ ಪಕ್ಷ ತೊರೆದು ಕೇಸರಿ ಪಕ್ಷಕ್ಕೆ ಸೇರಿದರೆ ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಡಲಾಗುವುದು ಎಂಬ ಪ್ರಸ್ತಾಪದೊಂದಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನನ್ನು ಸಂಪರ್ಕಿಸಿದೆ ಎಂದು ಮನೀಶ್ ಸಿಸೋಡಿಯಾ ಅವರ ಹೇಳಿಕೆಯ ನಂತರ ದೆಹಲಿ ಸಿಎಂ ಈ ರೀತಿ ಗುಡುಗಿದ್ದಾರೆ.
ಸಿಸೋಡಿಯಾ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, “ಸಿಬಿಐ ಮತ್ತು ಇಡಿ ದಾಳಿಗಳಿಗೂ ಅಬಕಾರಿ ನೀತಿ ಮತ್ತು ಭ್ರಷ್ಟಾಚಾರಕ್ಕೂ ಯಾವುದೇ ಸಂಬಂಧವಿಲ್ಲ? ಇತರ ರಾಜ್ಯಗಳಲ್ಲಿ ಮಾಡಿದಂತೆ, ದೆಹಲಿಯಲ್ಲಿ ಎಎಪಿ ಸರ್ಕಾರವನ್ನು ಉರುಳಿಸಲು ಮಾತ್ರ ಈ ದಾಳಿಗಳನ್ನು ನಡೆಸಲಾಗಿದೆ”. ಆದರೆ ದೆಹಲಿಯಲ್ಲಿ ಆಪರೇಷನ್ ಕಮಲ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದೆ..