
ಬೆಂಗಳೂರು: ಯಾದಗಿರಿ ಪಿಎಸ್‌ಐ (PSI)ಪರಶುರಾಮ್ಸಾ ವು ಪ್ರಕರಣದ ತನಿಖೆ ಸಿಬಿಐ ಅಥವಾ ಬೇರೆ ಯಾವುದಾದರೊಂದು ಸಂಸ್ಥೆಯ ತನಿಖೆಗೆ ನಿರ್ದೇಶಿಸಬೇಕು ಎಂದು ರಾಜ್ಯಪಾಲರಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೊರೆಯಿಟ್ಟಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ಬುಧವಾರ ಭೇಟಿ ಮಾಡಿದ ಅವರು, ಈ ಕುರಿತು ಮನವಿಪತ್ರ ಸಲ್ಲಿಸಿದ್ದಾರೆ.
ಯಾದಗಿರಿ ಶಾಸಕರ ಭ್ರಷ್ಟಾಚಾರಕ್ಕೆ ದಕ್ಷ, ನಿಷ್ಠಾವಂತ ದಲಿತ ಪೊಲೀಸ್ ಅಧಿಕಾರಿ ಪರಶುರಾಮ್ ಬಲಿಯಾಗಿದ್ದಾರೆ.ಪಿಎಸ್‌ಐ ಸಾವಿಗೆ ನ್ಯಾಯ ಕೊಡಿಸಬೇಕಾದ ಸರ್ಕಾರ, ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಪ್ರಕರಣದ ಆರೋಪಿಗಳನ್ನು ಈವರೆಗೂ ಬಂಧಿಸಿಲ್ಲ, ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಕಾರಣ ಸರ್ಕಾರದಿಂದ ನ್ಯಾಯ ಸಿಗುವ ಭರವಸೆಯಿಲ್ಲ.
ಹೀಗಾಗಿ ರಾಜ್ಯಪಾಲರು ಮಧ್ಯೆ ಪ್ರವೇಶಿಸಬೇಕು. ತಮಗಿರುವ ಅಧಿಕಾರ ಬಳಸಿಕೊಂಡು ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಬೇರೆ ಸಂಸ್ಥೆಯೊಂದಕ್ಕೆ ಒಪ್ಪಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಕೋರಿದ್ದಾರೆ.

