ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ನಡೆಸಿದ್ದಾರೆ. ಆರ್‌ಆರ್ ನಗರದಲ್ಲಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿ ಪರಿಶೀಲನೆ ನಡೆಸಿ ತೆರಳಿದ್ದಾರೆ
ಸದ್ಯ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದಾರೆ. ಇದೇ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪವನ್ನು ಡಿಕೆ ಶಿವಕುಮಾರ್ ಎದುರಿಸುತ್ತಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ ಮಧ್ಯಾಹ್ನ ಗ್ಲೋಬಲ್ ಅಕಾಡೆಮಿ ಕಾಲೇಜಿಗೆ ಬಂದ ಅಧಿಕಾರಿಗಳು ಅಲ್ಲಿನ ಸಿಬ್ಬಂದಿ ಬಳಿಕ ಅನೇಕ ದಾಖಲೆಗಳನ್ನು ಕೇಳಿ, ಪರಿಶೀಲನೆ ನಡೆಸಿದ್ದಾರೆ. ದಾಖಲೆ ಪರಿಶೀಲನೆ ನಡೆಸಿದ ಸಿಬಿಐ ತಂಡ ಕಾಲೇಜಿನಿಂದ ವಾಪಸ್ ಆಗಿದೆ.
ಡಿಕೆ ಶಿವಕುಮಾರ್ ಮತ್ತು ಅವರ ಪುತ್ರಿ ಐಶ್ವರ್ಯಾ ಅವರ ಆಸ್ತಿ ಮೌಲ್ಯಮಾಪನಕ್ಕೆ ಸಿಬಿಐ ಅಧಿಕಾರಿಗಳು ಬಂದಿದ್ದರು ಎನ್ನಲಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ದಾಖಲೆ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಆಸ್ತಿ ಮೌಲ್ಯಪಾಪನ ಮಾಡಿದ್ದಾರೆ ಎಂದು ಹೇಳಲಾಗಿದೆ.