ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಸೋಮವಾರ ದಾಳಿ ಮಾಡಿದೆ.
ನಗರದ ರಾಜಾರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಇನ್ಸ್‌ಟಿಟ್ಯೂಟ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಡಿಕೆಶಿ ಮಾಲೀಕತ್ವದ ಎಲ್ಲಾ ಆಸ್ತಿಗಳ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.