ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೈಗಾರಿಕೋದ್ಯಮಿಯೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳಿಲ್ಲದ ಮೂರು ಕೋಟಿ ರೂ. ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಭವಾನಿ ನಗರದ ಕೀಟನಾಶಕಗಳ ಕೈಗಾರಿಕೋದ್ಯಮಿ ರಮೇಶ ಎಂಬುವರ ಮನೆಯಲ್ಲಿ ದಾಖಲಾತಿಗಳಿಲ್ಲದ ಹಣ ದೊರೆತಿದೆ.
ಸಿಸಿಬಿ ಎಸಿಪಿ ನಾರಾಯಣ ಭರಮನಿ ಹಾಗೂ ಅಶೋಕ ನಗರ ಠಾಣೆ ಇನ್ಸಪೆಕ್ಟರ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಉದ್ಯಮಿ ಮನೆ ಮೇಲೆ ದಾಳಿ ಮಾಡಿ ಹಣ ಪತ್ತೆ ಮಾಡಿದ್ದಾರೆ. ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತನಿಖೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.