• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ದುಬೈನ ಬುರ್ಜ್ ಖಲೀಫಾ ಮೇಲೆ ಸಿಸಿಎಲ್ ವೈಭವ… ಫೆ.23ರಿಂದ ಶುರುವಾಗ್ತಿದೆ 10ನೇ ಸೀಸನ್…

Any Mind by Any Mind
February 4, 2024
in ಕ್ರೀಡೆ, ಸಿನಿಮಾ
0
ದುಬೈನ ಬುರ್ಜ್ ಖಲೀಫಾ ಮೇಲೆ ಸಿಸಿಎಲ್ ವೈಭವ… ಫೆ.23ರಿಂದ ಶುರುವಾಗ್ತಿದೆ 10ನೇ ಸೀಸನ್…
Share on WhatsAppShare on FacebookShare on Telegram

ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಅದರ ಭಾಗವಾಗಿ ನಿನ್ನೆ (feb.2) ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್ ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು. ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳುಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

ADVERTISEMENT

ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು. ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್ ದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

ಫೆಬ್ರವರಿ 23 ರಿಂದ ಆರಂಭವಾಗುವ ಸಿಸಿಎಲ್ನ 10ನೇ ಸೀಸನ್ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಲೀಗ್ ಸುತ್ತು ಮಾರ್ಚ್ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ಸ್ನ (United Arab Emirates) ಶಾರ್ಜಾದಲ್ಲಿ ನಡೆಯಲ್ಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಭಾರತದ ಜನಪ್ರಿಯ ಒಟಿಟಿ ವೇದಿಕೆಯಾಗಿರುವ ಜಿಯೊಸಿನಿಮಾ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಜೊತೆಗೆ ಸಹಭಾಗಿತ್ವವನ್ನು ಘೋಷಿಸಿದೆ. ಇದರ ಭಾಗವಾಗಿ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಹತ್ತನೇ ಸೀಸನ್ ಅನ್ನು ಜಿಯೊಸಿನಿಮಾ ಎಕ್ಸ್ಕ್ಲ್ಯೂಸಿವ್ ಆಗಿ ನೇರಪ್ರಸಾರ ಮಾಡಲಿದೆ. ಕ್ರೀಡೆ ಮತ್ತು ಮನರಂಜನೆಗಳನ್ನು ಒಂದುಗೂಡಿಸಿ ಭಾರತದಲ್ಲಿ ರೂಪಿಸಿರುವ ಏಕಮಾತ್ರ ಪ್ರಯತ್ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದಾಗಿದೆ.

ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್ಸ್ಟಾರ್ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಮೇಲೆ ಹೇಳಿದಂತೆ ಯುಎಇಯ ಶಾರ್ಜಾದಲ್ಲಿ ಲೀಗ್ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.

ತಂಡಗಳು ಯಾವುವು?
• ಮುಂಬೈ ಹೀರೋಸ್
• ಕೇರಳ ಸ್ಟ್ರೈಕರ್ಸ್
• ತೆಲುಗು ವಾರಿಯರ್ಸ್
• ಭೋಜ್ಪುರಿ ದಬಾಂಗ್ಸ್
• ಕರ್ನಾಟಕ ಬುಲ್ಡೋಜರ್ಸ್
• ಬೆಂಗಾಲ್ ಟೈಗರ್ಸ್
• ಚೆನ್ನೈ ರೈನೋಸ್
• ಪಂಜಾಬ್ ದಿ ಶೇರ್

‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್ಗೆ ವೆಂಕಟೇಶ್ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್ಗೆ ಕಿಚ್ಚ ಸುದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ಟೀಮ್ಗೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್ಗೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.

#Karnatakabulldozers #CCL2024 #CCLonBurjKhalifa #KichchaSudeepa #Theactorpradeep

Previous Post

ಸಂಸದೆ ಸುಮಲತಾಗೆ ಮಂಡ್ಯ ಲೋಕಸಭಾ ಟಿಕೆಟ್ ಬಹುತೇಕ ಡೌಟು?

Next Post

ವಿಶ್ವ ಕ್ಯಾನ್ಸರ್ ದಿನಾಚರಣೆ: ʻಕ್ಯಾನ್ ವಾಕ್ʼ ಜಾಗೃತಿ ನಡಿಗೆಗೆ ಸಹಸ್ರಾರು ಜನರ ಸ್ಪಂದನೆ

Related Posts

Top Story

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

by ಪ್ರತಿಧ್ವನಿ
July 8, 2025
0

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ & ರಿಷಿಕಾ ನಾಯಕ - ನಾಯಕಿಯಾಗಿ ನಟಿಸಿರುವ "ನಿದ್ರಾದೇವಿ next door"...

Read moreDetails

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025

Ragini Dwivedi: ಗೀತ ಗುಚ್ಛದ 3ನೇ ಹಾಡು ಬಿಡುಗಡೆ ಮಾಡಿದ ನಟಿ ರಾಗಿಣಿ ದ್ವಿವೇದಿ..

July 8, 2025

Greater Bangalore: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: ಡಿಸಿಎಂ ಡಿ.ಕೆ. ಶಿವಕುಮಾರ್

July 7, 2025
Next Post
ವಿಶ್ವ ಕ್ಯಾನ್ಸರ್ ದಿನಾಚರಣೆ: ʻಕ್ಯಾನ್ ವಾಕ್ʼ ಜಾಗೃತಿ ನಡಿಗೆಗೆ ಸಹಸ್ರಾರು ಜನರ ಸ್ಪಂದನೆ

ವಿಶ್ವ ಕ್ಯಾನ್ಸರ್ ದಿನಾಚರಣೆ: ʻಕ್ಯಾನ್ ವಾಕ್ʼ ಜಾಗೃತಿ ನಡಿಗೆಗೆ ಸಹಸ್ರಾರು ಜನರ ಸ್ಪಂದನೆ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada