
CCL 2025ರ ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಅದ್ಭುತ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಫೆಬ್ರವರಿ 22 ರಂದು ಸೂರತ್‌ನಲ್ಲಿ ನಡೆಯುವ ಪಂದ್ಯದಲ್ಲಿ ಪಂಜಾಬ್ ಡಿ ಶೇರ್ ವಿರುದ್ಧ ಆಡಲಿದೆ. ಈ ಬೆನ್ನಲ್ಲೇ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಕರ್ನಾಟಕದ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಕೊಟ್ಟಿದ್ದಾರೆ.
ಸಿಸಿಎಲ್ 2025ರ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಮೈಸೂರಿನಲ್ಲಿ ನಡೆಯಲಿವೆ ಎಂದು ಹೇಳಿದ್ದಾರೆ. ಮಾರ್ಚ್ 1 ಮತ್ತು 2ನೇ ತಾರೀಕಿನಂದು ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ಸಿಸಿಎಲ್ ಪಂದ್ಯಗಳು ನಡೆಯಲಿವೆ. ಮೈಸೂರಿನಲ್ಲಿ ಪಂದ್ಯಗಳನ್ನು ನಡೆಸಲು ಬೆಂಬಲ ನೀಡಿದ್ದಕ್ಕಾಗಿ ಸಿಸಿಎಲ್ ಮತ್ತು ಕೆಎಸ್‌ಸಿಎಗೆ ಕರ್ನಾಟಕ ಬುಲ್ಡೋಜರ್ಸ್ ನಾಯಕ ಸುದೀಪ್ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕ ಬುಲ್ಡೋಜರ್ಸ್ ನಿಮ್ಮನ್ನು ನೋಡಲು ಕಾಯುತ್ತಿದ್ದೇವೆ. ಟಿಕೆಟ್ ಮಾರಾಟದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ಸುದೀಪ್ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಿಸಿಎಲ್ ಪಂದ್ಯಗಳು ಆಯೋಜನೆಯಾಗುತ್ತಿದ್ದು ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟು ಮಾಡಿದೆ.