• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸಂಪುಟ ಪುನರ್ರಚನೆ: ಸದಾನಂದ ಗೌಡರಿಗೆ ಕೊಕ್, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ.!

ಪ್ರತಿಧ್ವನಿ by ಪ್ರತಿಧ್ವನಿ
July 7, 2021
in ದೇಶ
0
ಕೇಂದ್ರ ಸಂಪುಟ ಪುನರ್ರಚನೆ: ಸದಾನಂದ ಗೌಡರಿಗೆ ಕೊಕ್, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ.!
Share on WhatsAppShare on FacebookShare on Telegram

ಕೇಂದ್ರ ಸಚಿವ ಸಂಪುಟ ಪುನರ್‌ರಚನೆಯ ಹಿನ್ನೆಲೆಯಲ್ಲಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಡಿ ವಿ ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಅದೇ ವೇಳೆ, ಕರ್ನಾಟಕದಿಂದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ ಖೂಬಾ, ಚಿತ್ರದುರ್ಗ ಸಂಸದ ಎ ನಾರಾಯಣ ಸ್ವಾಮಿ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ಅವರು ಸಂಪುಟಕ್ಕೆ ಸೇರ್ಪಡೆಯಾಗುವುದು ಬಹುತೇಕ ಖಚಿತಗೊಂಡಿದೆ.

ADVERTISEMENT

ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಪ್ರಮುಖ ಸಚಿವರು ಹಾಗೂ ಸಂಭಾವ್ಯ ಸಚಿವರೊಂದಿಗೆ ಪುನರ್‌ರಚನೆಯ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಕೇಂದ್ರ ಸಂಪುಟದಲ್ಲಿರುವ ವರಿಷ್ಠರ ಸೂಚನೆಯಂತೆ ಹಲವು ಸಚಿವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಇವರಲ್ಲಿ ರಾಜ್ಯದ ಡಿವಿ ಸದಾನಂದ ಗೌಡ ಅವರೂ ಸೇರಿದ್ದಾರೆ. ತಾವು ರಾಜೀನಾಮೆ ಸಲ್ಲಿಸಿರುವುದನ್ನು ಸದಾನಂದ ಗೌಡ ಖಚಿತಪಡಿಸಿದ್ದಾರೆ.  

ಎ ನಾರಾಯಣ ಸ್ವಾಮಿ
ಭಗವಂತ್‌ ಕೂಬಾ

ಬೀದರ್ ಸಂಸದ ಭಗವಂತ ಖೂಬಾ ಅವರು ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತಗೊಂಡಿದೆ. ಪ್ರಧಾನಿ ಕಚೇರಿಯಿಂದ ಬುಧವಾರ ಮಧ್ಯಾಹ್ನ ಕರೆ‌ ಬಂದಿದ್ದು, ಕೇಂದ್ರ ಸಂಪುಟ ಸೇರ್ಪಡೆ ಖಾತರಿಯಾಗಿದೆ. ಕರೆ ಬಂದ ಹಿನ್ನೆಲೆಯಲ್ಲಿ, ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ‌ ಸಮಾರಂಭದಲ್ಲಿ ಭಾಗವಹಿಸಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಯತ್ತ ಹೊರಟಿದ್ದಾರೆ.

ಶೋಭಾ ಕರಂದ್ಲಾಜೆ

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಖಾತೆ ಸಚಿವ ಬಾಬುಲ್ ಸುಪ್ರಿಯೋ, ಶಿಕ್ಷಣ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಖಾತೆ ಸಚಿವೆ ದೇಬಾಶ್ರೀ ಚೌಧ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ರಾಜ್ಯ ಖಾತೆ ಸಚಿವ ಅಶ್ವಿನಿ ಚೌಬೆ, ಜಲಶಕ್ತಿ ರಾಜ್ಯ ಖಾತೆ ಸಚಿವ ರತನ್ ಲಾಲ್ ಕಠಾರಿಯಾ, ರಾವ್ ಸಾಹೇಬ್ ಧನ್ವೆ ಪಾಟೀಲ್, ಪ್ರತಾಪ್ ಚಂದ್ರ ಸಾರಂಗಿ ಈಗಾಗಲೇ ವರಿಷ್ಠರ ಸೂಚನೆಯಂತೆ ರಾಜೀನಾಮೆ ನೀಡಿದ್ದಾರೆ.

ರಾಜೀವ್‌ ಚಂದ್ರಶೇಖರ್

ಪತ್ರಿಕೋದ್ಯಮಿ ಆಗಿರುವ ರಾಜೀವ್‌ ಚಂದ್ರಶೇಖರ್ ರವರಿಗೆ ಏಶನಟ್‌ ಸುವರ್ಣ ನ್ಯೂಸ್‌ ವಾಹಿನಿಯ ಒಡೆತನವಿದೆ.

Tags: a narayana swamybhagavant koobhaD. V. Sadananda Gowdarajeev chandrashekar
Previous Post

ಸಂಪುಟ ವಿಸ್ತರಣೆ: ಹಿಂದುಳಿದ ವರ್ಗಗಳ ನಾಯಕರಿಗೆ ಮಣೆ

Next Post

ಉತ್ತರ ಕರ್ನಾಟಕದ ಗಡಿ ಭಾಗದ ಜಿಲ್ಲೆಗಳಲ್ಲಿ ಮೂರನೇ ಅಲೆ ಹಾಗೂ ಡೆಲ್ಟಾ+ ಆತಂಕ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಉತ್ತರ ಕರ್ನಾಟಕದ ಗಡಿ ಭಾಗದ ಜಿಲ್ಲೆಗಳಲ್ಲಿ ಮೂರನೇ ಅಲೆ ಹಾಗೂ ಡೆಲ್ಟಾ+ ಆತಂಕ

ಉತ್ತರ ಕರ್ನಾಟಕದ ಗಡಿ ಭಾಗದ ಜಿಲ್ಲೆಗಳಲ್ಲಿ ಮೂರನೇ ಅಲೆ ಹಾಗೂ ಡೆಲ್ಟಾ+ ಆತಂಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!