• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮೇರೆಗೆ ಪ್ರತಿಭಟನೆ ನಿಲ್ಲಿಸಿ ದೆಹಲಿಗೆ ಬಂದ ನೌಕರರ ಪ್ರಮುಖರು

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ

ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾದ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ ಕುಮಾರಸ್ವಾಮಿ ಅವರು; ಸಂಜೆ ಈ ಎಲ್ಲಾ ಪ್ರಮುಖರ ಜತೆ ಸಂಜೆ ನವದೆಹಲಿಯ ಶಾಸ್ತ್ರೀ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಚೇರಿಯಲ್ಲಿ ಸಚಿವರಾದ ಅನ್ನಪೂರ್ಣದೇವಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ನೌಕರರ ಪರವಾಗಿ ಸಚಿವರಿಗೆ ಅವರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಇಬ್ಬರು ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಜರಿದ್ದ ಈ ಸಭೆಯಲ್ಲಿ ಕರ್ನಾಟಕದಿಂದ ಬಂದಿದ್ದ ಹನ್ನೆರಡು ಮಂದಿ ನೌಕರರ ಪ್ರಮುಖರು ಭಾಗಿಯಾಗಿದ್ದರು. ಎಫ್ ಆರ್ ಎಸ್ ನೀತಿಯಲ್ಲಿ ಸುಧಾರಣೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಿಗೊಳಿಸುವುದು, ವಿಮಾ ಸೌಲಭ್ಯ, ಎಲ್ಲಾ ನೌಕರರ ವೇತನ ಹೆಚ್ಚಳ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಚಿವರೊಬ್ಬರು ಪ್ರಮುಖರ ಜತೆ ಚರ್ಚಿಸಿದರು.

ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಗೆ ನಿಯೋಜಿಸದಿರುವ ಬಗ್ಗೆ ಚುನಾವಣೆ ಆಯೋಗದ ಜತೆ ಚರ್ಚೆ ನಡೆಸಲಾಗುವುದು ಹಾಗೂ ಎಲ್ಲಾ ನೌಕರರಿಗೂ ಕೆಲಸದ ಒತ್ತಡ ಕಡಿಮೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಸಚಿವೆ ಅನ್ನಪೂರ್ಣದೇವಿ ಅವರು ಭರವಸೆ ನೀಡಿದರು.  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವ್ಯಾಪ್ತಿಗೆ ಬರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗುವುದು. ನಿಮ್ಮ ಮೇಲಿನ ಕಾಳಜಿ ಹಾಗೂ ಮಾನವೀಯ ನೆಲೆಗಟ್ಟಿನ ಮೇರೆಗೆ ಬೇಡಿಕೆಗಳ ಈಡೇರಿಕೆಗೆ ಪರಿಶೀಲನೆ ನಡೆಸಲಾಗುವುದು ಎಂದು ಅನ್ನಪೂರ್ಣದೇವಿ ಅವರು ಭರವಸೆ ನೀಡಿದರು.

ನರೇಂದ್ರ ಮೋದಿ ಅವರ ಸರ್ಕಾರ ನಿಮ್ಮ ಜತೆಗಿದೆ. ಕರ್ನಾಟಕದಲ್ಲಿನೀವು ನಡೆಸುತ್ತಿದ್ದ ಪ್ರತಿಭಟನಾ ಚಳವಳಿಯ ಬಗ್ಗೆ ಸಚಿವರಾದ ಕುಮಾರಸ್ವಾಮಿ ಅವರು ನನ್ನೊಂದಿಗೆ ವಿವರವಾಗಿ ಚರ್ಚೆ ನಡೆಸಿದ್ದಾರೆ. ನೀವು ಉತ್ತಮ, ಶ್ರೇಷ್ಠ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಜತೆ ಸರಕಾರವಿದೆ. ಆದಷ್ಟು ಬೇಡಿಕೆಗಳನ್ನು ಈಡೇರಿಸಲಾಗುವುದು. ನಿಮಗೆ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ, ನಿಮಗೆ ಮತ್ತಷ್ಟು ಉತ್ತಮ ಸೌಲಭ್ಯ ಕಲಿಸ್ಪಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅನ್ನಪೂರ್ಣದೇವಿ ಅವರು ಅಂಗನವಾಡಿ ಪ್ರಮುಖರಿಗೆ ತಿಳಿಸಿದರು.

ಈ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಅನಿಲ್ ಮಲಿಕ್ ಸೇರಿದಂತೆ ಮತ್ತಷ್ಟು ಉನ್ನತ ಅಧಿಕಾರಿಗಳು ಹಾಜರಿದ್ದರು. ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ನೌಕರರ ಪ್ರಮುಖರನ್ನು ಭೇಟಿಯಾದ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನನ್ನ ಮನವಿಗೆ ಓಗೊಟ್ಟು ಪ್ರತಿಭಟನೆ ಕೊನೆಗೊಳಿಸಿ ನವದೆಹಲಿಗೆ ಬಂದಿದ್ದು ಸ್ವಾಗತಾರ್ಹ. ನೀವೆಲ್ಲರೂ ಮೈಕೊರೆಯುವ ಚಳಿಯಲ್ಲಿ ರಸ್ತೆಯ ಮೇಲೆ ಧರಣಿ ಕೂರುವುದು ಅತ್ಯಂತ ನೋವಿನ ಸಂಗತಿ. ಚರ್ಚೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅದಕ್ಕಾಗಿಯೇ ನಿಮ್ಮನ್ನು ಇಲ್ಲಿಗೆ ಕರೆಸಿಕೊಳ್ಳಲಾಯಿತು. ಪ್ರತಿಭಟನೆಗಿಂತ ಚರ್ಚೆ ಮಾಡುವುದು ಉತ್ತಮ ಮಾರ್ಗ ಎಂದು ತಿಳಿಸಿದರು.

ಇದೇ ವೇಳೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೌಕರರ ಬೇಡಿಕೆಗಳ ಬಗ್ಗೆ ದೂರವಾಣಿಯಲ್ಲಿ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮಾತುಕತೆ ನಡೆಸಿದ ಸಚಿವ ಕುಮಾರಸ್ವಾಮಿ ಅವರು; ಪ್ರಧಾನ್ ಅವರೊಂದಿಗೆ ನೌಕರರ ಪ್ರಮುಖರ ಸಭೆಯನ್ನು ನಿಗದಿಗೊಳಿಸಿ, ಅವರ ನಿವಾಸಕ್ಕೆ ಅಧಿಕಾರಿಗಳ ಸಮೇತ ಕಳಿಸಿದರು. ಸಚಿವ ಪ್ರಧಾನ್ ಅವರ ಜತೆಗೂ ಮಾತುಕತೆ ನಡೆಸಿದ ಪ್ರಮುಖರು, ತಮ್ಮ ಬೇಡಿಕೆ, ಸಂಕಷ್ಟಗಳ ಬಗ್ಗೆ ಚರ್ಚಿಸಿದರು. ಈ ಅವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ್ ಅವರು, ಈ ಬಗ್ಗೆ ಕುಮಾರಸ್ವಾಮಿ ಅವರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

ಎಸ್. ವರಲಕ್ಷ್ಮೀ, ಹೆಚ್.ಎಸ್. ಸುನಂದಾ, ಮಾಲಿನಿ ಮೇಸ್ತಾ, ಶಾಂತಾ, ಲಕ್ಷ್ಮೀದೇವಮ್ಮ, ಮಹದೇವಮ್ಮ, ಶಶಿಕಲಾ, ದೊಡ್ಡವ್ವ ಪೂಜಾರಿ, ನಂಜಮ್ಮ, ಗುಲ್ಜಾರ್, ಉಷಾರಾಣಿ, ಸಿಂಧು, ಸವಿತಾ ಅವರು ನೌಕರರ ನಿಯೋಗದಲ್ಲಿ ಇದ್ದರು. ನನ್ನ ಮನವಿಗೆ ಓಗೊಟ್ಟು ಪ್ರತಿಭಟನೆ ನಿಲ್ಲಿಸಿ ದೆಹಲಿಗೆ ಬಂದ ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಪ್ರಮುಖರ ಜತೆಗಿನ ಮಾತುಕತೆ ಉತ್ತವಾಗಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರೊಂದಿಗೆ ನಡೆದ ಸಭೆಯಲ್ಲಿ ಎಲ್ಲಾ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

Tags: big relief for hd kumaraswamychief minister hd kumaraswamycm hd kumaraswamyDelhigt devegowda on hd kumaraswamyHD Kumaraswamyhd kumaraswamy g t devegowdahd kumaraswamy interviewhd kumaraswamy latest newshd kumaraswamy livehd kumaraswamy newshd kumaraswamy nose bleedinghd kumaraswamy on congresshd kumaraswamy on rsshd kumaraswamy press meet livehd kumaraswamy vs gt dvegowdahd kumarswamykarnataka cm hd kumaraswamyKolar MLAKolar MPMallesh Babump kumarswamyzameer khan hd kumaraswamyzameer khan vs hd kumaraswamy
Previous Post

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

Next Post

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!