• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ನ್ಯಾಯಮಂಡಳಿಗಳಿಗೆ ನೇಮಕಾತಿ ಆಯ್ಕೆ ಮಾಡುತ್ತಿದೆ: ಸುಪ್ರೀಂ ಕೋರ್ಟ್ ಆಕ್ಷೇಪ

ನೀಲಿ by ನೀಲಿ
September 16, 2021
in ದೇಶ
0
ಕೇಂದ್ರ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ನ್ಯಾಯಮಂಡಳಿಗಳಿಗೆ ನೇಮಕಾತಿ ಆಯ್ಕೆ ಮಾಡುತ್ತಿದೆ: ಸುಪ್ರೀಂ ಕೋರ್ಟ್ ಆಕ್ಷೇಪ
Share on WhatsAppShare on FacebookShare on Telegram

ಇತ್ತೀಚೆಗೆ ಕೇಂದ್ರ ಸರ್ಕಾರವು ವಿವಿಧ ನ್ಯಾಯಮಂಡಳಿಗಳಿಗೆ ನೇಮಕಾತಿಗಳನ್ನು ಅನುಮೋದಿಸಿದ ವಿಧಾನಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಆಕ್ಷೇಪ ವ್ಯಕ್ತಪಡಿಸಿದೆ.

ADVERTISEMENT

ವಿವಿಧ ನ್ಯಾಯಮಂಡಳಿ, ನ್ಯಾಯಾಧಿಕರಣಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇತ್ತೀಚಿಗೆ ಅನುಸರಿಸಿದ ವಿಧಾನಕ್ಕೆ ಸುಪ್ರೀಂಕೋರ್ಟ್ ಬುಧವಾರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡಿ ಉಳಿದವರ ನೇಮಕಾತಿ ತಡೆ ಹಿಡಿದಿದ್ದು, ಶೋಧ ಮತ್ತು ಆಯ್ಕೆ ಸಮಿತಿಗಳು (ಎಸ್ಸಿಎಸ್ಸಿ) ಮಾಡಿದ ಶಿಫಾರಸುಗಳನ್ನು ಅತೃಪ್ತಿಕರ ರೀತಿಯಲ್ಲಿ ಪರಿಗಣಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ವಿಶೇಷ ಪೀಠ ಆಕ್ಷೇಪ ವ್ಯಕ್ತಪಡಿಸಿದೆ.

“ಎಸ್ಸಿ ಒಂಬತ್ತು ನ್ಯಾಯಾಂಗ ಸದಸ್ಯರನ್ನು ಮತ್ತು ಹತ್ತು ತಾಂತ್ರಿಕ ಸದಸ್ಯರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಗೆ (NCLT) ಶಿಫಾರಸು ಮಾಡಿದೆ. ಕೆಲ ಸದಸ್ಯರನ್ನು ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡಲಾಗಿದ್ದು ಉಳಿದವರನ್ನು ತಡೆ ಹಿಡಿಯಿಡಿದು ನೇಮಕಾತಿ ಪತ್ರ ನೀಡಲಾಗಿದೆ. ನಾವು ಆಯ್ಕೆ ಮಾಡಿದ ಅಭ್ಯರ್ಥಿಗಳ ಬಗ್ಗೆ ನಿರ್ಲಕ್ಷಿಸಿ ನಿರೀಕ್ಷಣಾ ಪಟ್ಟಿಗೆ ಹೋಗಲು ಸಾಧ್ಯವಿಲ್ಲ. ಇದು ಯಾವ ರೀತಿಯ ಆಯ್ಕೆ ಮತ್ತು ನೇಮಕಾತಿ?” ಎಂದು ಸಿಜೆಐ ರಮಣ ನೇತೃತ್ವದ ವಿಶೇಷ ಪೀಠ ಕೇಳಿದ್ದಾರೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ (ಐಟಿಎಟಿ) ನೇಮಕಾತಿಯಲ್ಲೂ ಇದೇ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್ಸಿಎಸ್ಸಿ ರಚನೆಯಾಗಿದ್ದು ನ್ಯಾಯಮೂರ್ತಿಗಳು ನೇಮಕಾತಿಗಾಗಿ ಅಂತಿಮ ಪಟ್ಟಿ ತಯಾರಿಸುತ್ತದೆ. ನಂತರ ಅನುಮೋದನೆಗಾಗಿ ಆ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸುತ್ತಾರೆ.

ನ್ಯಾಯಾಧಿಕರಣ ಸುಧಾರಣಾ ಕಾಯಿದೆ 2021ರ ಸಾಂವಿಧಾನಿಕ ಸಿಂಧುತ್ವ ಮತ್ತು ದೇಶದ ವಿವಿಧ ನ್ಯಾಯಾಧಿಕರಣಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಪ್ರಸ್ತಾಪಿಸಿರುವ ಕೆಲ ಅರ್ಜಿಗಳ ವಿಚಾರಣೆಯನ್ನು ತ್ರಿಸದಸ್ಯ ಪೀಠ ನಡೆಸಿತು.

ನ್ಯಾಯಮಂಡಳಿಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡುವಲ್ಲಿ ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಮತ್ತು ತನ್ನ ತೀರ್ಪು ಉಲ್ಲಂಘಿಸಿ 2021ರ ನ್ಯಾಯಾಧಿಕರಣ ಸುಧಾರಣಾ ಕಾಯಿದೆಯನ್ನು ಜಾರಿಗೊಳಿಸಿದ್ದಕ್ಕಾಗಿ ಪೀಠ ಕೇಂದ್ರ ಸರ್ಕಾರದ ವಿರುದ್ಧ ಸೆಪ್ಟೆಂಬರ್ 6ರಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಎಸ್ಸಿಎಸ್ಸಿ ಶಿಫಾರಸುಗಳನ್ನು ಪಾಲಿಸಬೇಕು ಇಲ್ಲವೇ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಎದುರಿಸಬೇಕು ಎಂದು ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿತ್ತು.

ಬಳಿಕ ಎನ್ಸಿಎಲ್ಟಿ, ಎಎಫ್ಟಿ ಮತ್ತು ಐಟಿಎಟಿ ನೇಮಕಾತಿಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಎಸ್ಸಿಎಸ್ಸಿ ಶಿಫಾರಸಿನ ಮೇರೆಗೆ ಎಲ್ಲಾ ನೇಮಕಾತಿ ನಡೆದಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ, ಕೇಂದ್ರ ಸರ್ಕಾರ ತಿಳಿಸಿತ್ತು. ಆದರೆ ಇದರಿಂದ ನ್ಯಾಯಾಲಯ ತೃಪ್ತಿ ಹೊಂದಿರಲಿಲ್ಲ.

ಅರ್ಜಿದಾರರೊಬ್ಬರ ಪರವಾಗಿ ಹಾಜರಾದ ಹಿರಿಯ ವಕೀಲ ಅರವಿಂದ ದಾತಾರ್, ಐಟಿಎಟಿಗೆ ಕೇವಲ 13 ಸದಸ್ಯರನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ. ಯಾವ ಆಧಾರದ ಮೇಲೆ ನೇಮಕಾತಿ ನಡೆದಿದೆ ಎಂದು ಅವರು ಪ್ರಶ್ನಿಸಿದಾಗ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಎಸ್ಸಿಎಸ್ಸಿಯ ಶಿಫಾರಸುಗಳನ್ನು ಸ್ವೀಕರಿಸದಿರುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಸಮರ್ಥಿಸಿಕೊಂಡರು. ಅಲ್ಲದೆ, ಮುಖ್ಯಪಟ್ಟಿಯಲ್ಲಿರುವ ಹೆಸರುಗಳನ್ನು ಪೂರ್ಣವಾಗಿ ಪರಿಗಣಿಸಿದ ನಂತರವೇ ಸರ್ಕಾರವು ನಿರೀಕ್ಷಣಾ ಪಟ್ಟಿಯಲ್ಲಿರುವ ಹೆಸರುಗಳೆಡೆಗೆ ಮುಖಮಾಡಿರುವುದಾಗಿಯೂ ತಿಳಿಸಿದ್ದಾರೆ. ಹಾಗಾಗಿ, ಆರು ನ್ಯಾಯಮಂಡಳಿಗಳಿಗೆ ಯಾವುದೇ ಶಿಫಾರಸ್ಸುಗಳು ಬಾಕಿ ಉಳಿದಿಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ತೃಪ್ತಿಯಾಗದ ಸಿಜೆಐ, ಶಿಫಾರಸುಗಳ ಕುರಿತಾಗಿ ಕೇಂದ್ರವು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ತಮಗೆ ತೃಪ್ತಿ ಇಲ್ಲ ಎಂದು ತಿಳಿಸಿದರು. ಟಿಡಿಎಸ್ಎಟಿ, ಎನ್ಸಿಡಿಆರ್ಸಿ ನೇಮಕಾತಿಗಳ ಬಗ್ಗೆಯೂ ನ್ಯಾಯಾಲಯ ಆಕ್ಷೇಪಿಸಿತು.

ನಂತರ ಅಟಾರ್ನಿ ಜನರಲ್ ಪ್ರಕರಣವನ್ನು ಒಂದು ವಾರ ಮುಂದೂಡುವಂತೆ ಕೋರಿದ್ದು. ಒಪ್ಪಿಕೊಳ್ಳದೆ ಇರುವ ಪಟ್ಟಿಯನ್ನು ನಾವು ಮರುಪರಿಗಣಿಸಲಿದ್ದೇವೆ ಎಂದು ಅವರು ಭರವಸೆ ನೀಡಿದ್ದಾರೆ. ಆದರೆ, ಇದೇ ವೇಳೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರನ್ನು ಪರಿಗಣಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಮತ್ತು ನ್ಯಾಯಾಲಯವು ಇದಕ್ಕೆ ಸಮ್ಮತಿಸಿ, ಪ್ರಕರಣವನ್ನು ಒಂದು ವಾರ ಮುಂದೂಡಿದ್ದಾರೆ.

Tags: BJPsupreme courtsupreme court benchSupreme Court CollegiumSupreme Court judgmentsSupreme Court of Indiaಬಿಜೆಪಿ
Previous Post

ರಾಮಚಂದ್ರಾಪುರ ಮಠ ಅರಣ್ಯ ಒತ್ತುವರಿ ಪ್ರಕರಣದ ತೀರ್ಪು ಮಲೆನಾಡಿನ ಬಡ ರೈತರ ಆತಂಕ ನಿವಾರಿಸುವುದೇ?

Next Post

ಲಾಕ್‌ಡೌನ್‌ ಅವಧಿಯಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆ: ಸಂಘರ್ಷ ಹೆಚ್ಚಳ: NCRB ವರದಿ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಲಾಕ್‌ಡೌನ್‌ ಅವಧಿಯಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆ: ಸಂಘರ್ಷ ಹೆಚ್ಚಳ: NCRB ವರದಿ

ಲಾಕ್‌ಡೌನ್‌ ಅವಧಿಯಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆ: ಸಂಘರ್ಷ ಹೆಚ್ಚಳ: NCRB ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada