ಕೇಂದ್ರ ಸರ್ಕಾರ ನಯಾ ಪೈಸೆ GST ಬಾಕಿ ಉಳಿಸಿಕೊಂಡಿಲ್ಲ. ಒಟ್ಟಾರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 2.36 ಲಕ್ಷ ಕೋಟಿ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ರೀತಿ ಗೊಂದಲ ಸೃಷ್ಟಿ ಮಾಡಿದ್ದಾರೆ.

ಹಣಕಾಸು ಆಯೋಗ ಮಾಡಿದ ಶಿಫಾರಸು ಅಂತಿಮವಾಗಿದೆ. ಕರ್ನಾಟಕಕ್ಕೆ ವಿಶೇಷ ಅನುದಾನಕ್ಕೆ ಎಲ್ಲೂ ಶಿಫಾರಸು ಮಾಡಿಲ್ಲ. ಅಂತರರಾಜ್ಯ ಜಿಎಸ್ಟಿ ಶೇಕಡಾ 50ರಷ್ಟು ರಾಜ್ಯಕ್ಕೆ ಹೋಗುತ್ತಿದೆ. ಈ ತೆರಿಗೆ ಪದ್ಧತಿ ನೆಹರೂ ಕಾಲದಿಂದಲೂ ಇದೆ ಕೇಂದ್ರ ಸರ್ಕಾರ ಕರ್ನಾಟಕ ಪಾಲಿನ ನಯಾ ಪೈಸೆ ಜಿಎಸ್ಟಿ ಬಾಕಿ ಉಳಿಸಿಕೊಂಡಿಲ್ಲ ಎಂದರು

ರಾಜ್ಯಕ್ಕೆ 6,280 ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ರಾಜ್ಯಕ್ಕೆ 18,000 ಕೋಟಿ ರೂಪಾಯಿ ಅನುದಾನ ನೀಡಲಿದ್ದೇವೆ ಒಟ್ಟಾರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 2.36 ಲಕ್ಷ ಕೋಟಿ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ದಾರಿ ತಪ್ಪಿಸಲು ಮುಂದಾಗಿದ್ದಾರೆ ಎಂದರು.
#Siddaramiah #Prahaladjoshi #GSTtax #modi #Bjp #Congress