• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಲೂಟಿ ಮಾಡಿದ್ದು ಸಾಲದೇ?: ಕಾಂಗ್ರೆಸ್‌ ವಿರುದ್ಧ HDK ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
January 11, 2026
in Top Story, ಕರ್ನಾಟಕ, ರಾಜಕೀಯ
0
ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಲೂಟಿ ಮಾಡಿದ್ದು ಸಾಲದೇ?: ಕಾಂಗ್ರೆಸ್‌ ವಿರುದ್ಧ HDK ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ಜಿ ರಾಮ್ ಜಿ (G RAM G) ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಅವರು ರಾಜ್ಯ ಕಾಂಗ್ರೆಸ್(Congress) ನಾಯಕರಿಗೆ ಸವಾಲು ಹಾಕಿದ್ದಾರೆ.

ADVERTISEMENT
Chaluvarayaswamy : ದೇವೇಗೌಡರು ಆಗ ಸೆಕ್ಯೂಲರ್‌ ಪಾರ್ಟಿ ಅಂತಿದ್ರು..ಈಗ ಹೀಗೆ ಮಾಡ್ಬಿಟ್ರು..! #pratidhvani

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದೆ. ಯಾವುದಾದರೂ ಪ್ರಮುಖ ಯೋಜನೆಗಳಿಗೆ ಮಹಾತ್ಮ ಗಾಂಧಿ ಅವರ ಹೆಸರನ್ನಿಟ್ಟಿದ್ದಾರೆಯೇ? ಎಲ್ಲಾ ಯೋಜನೆಗಳಿಗೆ ನೆಹರು ಕುಟುಂಬದ ಸದಸ್ಯರ ಹೆಸರುಗಳನ್ನು ಇಟ್ಟು ಗಾಂಧೀಜಿಗೆ ದ್ರೋಹ ಬಗೆದಿದ್ದಾರೆ. ಇವರಿಗೆ ಗಾಂಧೀಜಿ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

Siddaramaih : ಪಾಪ ಬಿಜೆಪಿಯವರು ಪಾದಯಾತ್ರೆ ಮಾಡಲಿ ಬೇಡ ಅಂದವರು ಯಾರು..? #pratidhvani #siddaramaiah

ಹೊರಗೆ ಅಪಪ್ರಚಾರ ಮಾಡುತ್ತಿರುವುದು ಸಾಲದು ಎಂಬಂತೆ ವಿಧಾನಸಭೆ ಅಧಿವೇಶನವನ್ನು ಬೇರೆ ಕರೆಯುತ್ತಿದ್ದಾರೆ. ಪಾದಯಾತ್ರೆಯನ್ನು ಕೂಡ ನಡೆಸುತ್ತಾರಂತೆ. ಯಾವ ಪುರುಷಾರ್ಥಕ್ಕೆ ಇದೆಲ್ಲವನ್ನೂ ಮಾಡುತ್ತಾರೆ? ನರೇಗಾ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಲೂಟಿ ಮಾಡಿದ್ದು ಸಾಲದೇ? ಕಾಂಗ್ರೆಸ್‌ನವರಿಂದ ಬಡ ಕೂಲಿ ಕಾರ್ಮಿಕರಿಗೆ ನ್ಯಾಯ ಸಿಕ್ಕುತ್ತದೆಯೇ? ಕಾರ್ಮಿಕರಿಗೆ ನ್ಯಾಯ ಮಾಡದೆ ಇವರು ಏನು ಮಾಡುತ್ತಿದ್ದರು? ನಕಲಿ ಬಿಲ್ಲುಗಳನ್ನು ತಡೆಯಲು, ನಕಲಿ ಕಾರ್ಡುಗಳನ್ನು ಪತ್ತೆ ಹಚ್ಚಲು ಇವರು ವಿಫಲವಾಗಿದ್ದು ಯಾಕೆ? ಎಂದು ಸಚಿವ ಕುಮಾರಸ್ವಾಮಿ ಪ್ರಶ್ನಿಸಿದರು.

DKS v/s HDK: ಕುಮಾರಸ್ವಾಮಿ ಮಾತಿಗೆ ಖಡಕ್ ಕೌಂಟರ್ ಕೊಟ್ಟ DK ಸುರೇಶ್ #pratidhvani

ನರೇಗಾ ಯೋಜನೆ ಸ್ಥಗಿತವಾಗಿಲ್ಲ. ಕಳೆದ ಅನೇಕ ವರ್ಷಗಳಿಂದ ಈ ಯೋಜನೆಯಲ್ಲಿ ನಡೆದಿದ್ದ ಅಕ್ರಮಗಳನ್ನು ನರೇಂದ್ರ ಮೋದಿ ಅವರ ಸರಕಾರ ಸರಿಪಡಿಸಿ ಅದರಲ್ಲಿ ಅನೇಕ ಮಹತ್ವದ ಸುಧಾರಣೆಗಳನ್ನು ತಂದಿದೆ. ಲೋಪಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡುವುದು ತಪ್ಪು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಸರಿಯಲ್ಲ. ಜಿ ರಾಮ್ ಜಿ ಯೋಜನೆಯಿಂದ ಗ್ರಾಮ ಪಂಚಾಯ್ತಿ ಅಧಿಕಾರಕ್ಕೆ ಆಗಲಿ ಅಥವಾ ರಾಜ್ಯ ಸರ್ಕಾರಗಳ ಅಧಿಕಾರಕ್ಕೆ ಯಾವುದೇ ಧಕ್ಕೆ ಆಗಲ್ಲ ಎಂದರು.

Siddaramaiah ಸೈಡ್ ಗೆ ಬಾರಯ್ಯ ನಾನು ಗಾಲ್ಫ್ ಆಡ್ತಿನಿ #pratidhvani #siddaramaiah #mangaluru

ಈ ಯೋಜನೆಗೆ ಪೂರ್ಣ ಅನುದಾನ ನೀಡುತಿರುವುದು ಕೇಂದ್ರ ಸರ್ಕಾರ. ಕೇಂದ್ರ ನೀಡಿರುವ ಅನುದಾನವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಕೆ ಮಾಡುತ್ತಿಲ್ಲ. ಅದರಲ್ಲಿ ಪಾರದರ್ಶಕತೆ ಇಲ್ಲ. ಈ ಯೋಜನೆ ಹೆಸರಲ್ಲಿ ಕಳ್ಳಬಿಲ್ಲುಗಳನ್ನು ಮಾಡಿಕೊಂಡು ಲೂಟಿ ಮಾಡಲಾಗಿದೆ. ಇದು ಶುರು ಆದಾಗಿನಿಂದ ಆಗಿರುವ ಲೋಪಗಳನ್ನು ಸರಿಪಡಿಸಿ ಹೊಸ ಯೋಜನೆ ರೂಪಿಸಲಾಗಿದೆ. ಮನರೇಗಾದಲ್ಲಿ ಇದ್ದ ತಪ್ಪುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದು ವಿವರಿಸಿದರು.

CM Siddaramaiah On Karnataka Governor | ರಾಜ್ಯಪಾಲರ ವಿರುದ್ಧ ಮತ್ತೆ ರೊಚ್ಚಿಗೆದ್ದ ಸಿಎಂ #pratidhvani

ಗಾಂಧೀಜಿ ಅವರ ಹೆಸರನ್ನು ಕೇವಲ ಚುನಾವಣೆಗೆ ಮತ್ತು ಮತಕ್ಕಾಗಿ ಕಾಂಗ್ರೆಸ್ ಬಲಕ್ಕೆ ಮಾಡಿಕೊಂಡಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಯೋಜನೆಯ ಬಜೆಟ್ ಅನ್ನು ಕಡಿತಗೊಳಿಸಿತ್ತು. ಕಾರ್ಮಿಕರ ವೇತನವನ್ನು ಸ್ಥಗಿತಗೊಳಿಸಿದ ಇತಿಹಾಸವೂ ಆ ಪಕ್ಷಕ್ಕೆ ಇದೆ. ಈಗ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಪ್ರತಿ ಪೈಸೆಯೂ ನೇರವಾಗಿ ಕಾರ್ಮಿಕರ ಖಾತೆಗೆ ಮುಟ್ಟುತ್ತಿದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Siddaramaih : 50% ಕೇಸ್‌ನ ಪೊಲೀಸರು ತನಿಖೆಯಲ್ಲೇ ಕೆಡಿಸಿಬಿಟ್ಟಿರುತ್ತಾರೆ #pratidhvani #siddaramaiah

ಈ ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಶಕ್ತಿ, ಅಧಿಕಾರ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳೇ ತಮಗೆ ಬೇಕಾದ ಯೋಜನೆಗಳನ್ನು ರೂಪಿಸಲಿವೆ ಹಾಗೂ ಗ್ರಾಮ ಸಭೆಗಳು ಕೆಲಸದ ಆದ್ಯತೆ ಗುರುತಿಸಿ ಅನುಷ್ಠಾನ, ಮೇಲ್ವಿಚಾರಣೆ ಮತ್ತು ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸುವ ಮೂಲಕ ಪಾರದರ್ಶಕತೆ ತರಲಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

Kodi Shree 2026 Predictions on CM Post: CM ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ #pratidhvani

ಜಿ ರಾಮ್ ಜಿ ಯೋಜನೆಯನ್ನು 60:40% ಅನುಪಾತದಲ್ಲಿ ರೂಪಿಸಲಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅಕ್ರಮವಾಗಿ ಹಣ ಪಡೆಯಲಾಗಿದೆ. ರಾಜ್ಯ ಸರ್ಕಾರಕ್ಕೂ ಜವಾಬ್ದಾರಿ ಇರಲಿ ಅಂತ 40% ರಾಜ್ಯದ ಪಾಲು ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೂ ಜವಾಬ್ದಾರಿ ಕೊಡಲಾಗಿದೆ, ಎಲ್ಲವನ್ನೂ ಕಿತ್ತುಕೊಂಡಿಲ್ಲ. ಇದನ್ನು ರಾಜ್ಯ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದರು.

siddaramaiah : ಏಯ್‌.. ನನ್ನ ಮಾತು ಕೇಳಿ ನಗ್ತೀಯಾ ಅಲ್ಲಮ್ಮಾ.. #pratidhvani #siddaramaiah #congress

ಪ್ರಹ್ಲಾದ್ ಜೋಶಿ ಹೇಳಿದ್ದು ಹಾಗಲ್ಲ..ಡಿಸಿಎಂ ಗೊಂದಲ ಮಾಡಿಕೊಂಡರು

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಸುಳ್ಳು ಹೇಳಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತೀರಾ ಎಂದು ಚಾಲೆಂಜ್ ಹಾಕಿದ್ದಾರೆ. ನಿಜಕ್ಕೆ ಜೋಶಿ ಅವರು ಹೇಳಿರುವುದು ನರೇಗಾದಲ್ಲಿನ ಸೋಶಿಯಲ್ ಆಡಿಟ್ ಯೂನಿಟ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ನರೇಗಾದಲ್ಲಿ ₹11 ಲಕ್ಷ ಕೋಟಿ ಅವ್ಯವಹಾರ ಆಗಿದೆ ಎಂದು ಜೋಷಿ ಹೇಳಿದ್ದಾರೆ ಎಂಬುದಾಗಿ ಆರೋಪ ಮಾಡಿದ್ದರು. ಡಿಕೆಶಿ ಆರೋಪ ತಪ್ಪು. 11 ಲಕ್ಷ ಕೋಟಿ ಹಣವಲ್ಲ, ಅಷ್ಟು ಕೆಲಸ ಆಗಿದೆ ಎಂದು ಜೋಷಿ ಅವರು ಹೇಳಿದ್ದಾರೆ ಅಷ್ಟೇ. ಇದರ ಬಗ್ಗೆ ಡಿಸಿಎಂ ಅವರು ಗೊಂದಲ ಮಾಡಿಕೊಂಡು ಹೀಗೆ ಹೇಳಿದ್ದಾರೆ ಎಂದರು.

Shivaramegowda is against DKS and Devarajegowda | ಬೆಂಗಳೂರಿನಲ್ಲಿ ಎಲ್‌.ಆರ್‌. ಶಿವರಾಮೇಗೌಡ ಹೇಳಿಕೆ

ಇನ್ನು ಕೇಂದ್ರದಲ್ಲಿ 2005ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಳ್ಳೆಯ ಉದ್ದೇಶದಿಂದಲೇ ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆ ತಪ್ಪು ಅಂತ ನಾನು ಹೇಳಲ್ಲ. ಬಡ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ತಪ್ಪಿಸಲು ಈ ಯೋಜನೆ ಸಹಕಾರಿಯಾಗಿದೆ. ನಂತರದ ದಿನಗಳಲ್ಲಿ ಕಾಂಗ್ರೆಸ್ ಈ ಯೋಜನೆಯನ್ನು ಹಾಳುಗೆಡವಿತು. ಭಾರೀ ಭ್ರಷ್ಟಾಚಾರ ಕಂಡು ಬಂದಿದೆ. ಈ ತಪ್ಪುಗಳನ್ನು ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಸರಿ ಮಾಡಲಿಲ್ಲ. ಈಗ ಮೋದಿ ಅವರು ಎಲ್ಲವನ್ನೂ ಸರಿಪಡಿಸಿ ಸುಧಾರಣೆ ತಂದಿದ್ದಾರೆ. ಇದನ್ನು ಕಾಂಗ್ರೆಸ್ ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಬೇಕು ಎಂದು ಹೇಳಿದರು.

Tags: BJPCentral GovernmentcongressH D KumaraswamyJDSState GovernmentVB-G RAM G Bill
Previous Post

GADAG: ಕೆಜಿಗಟ್ಟಲೆ ಚಿನ್ನವಿದ್ದ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ ತಾಯಿ-ಮಗ

Next Post

ಸೈಕೋ ಪತಿ ಕೇಸ್​ಗೆ​​ ಟ್ವಿಸ್ಟ್: ಒಂದಲ್ಲ..ಎರಡಲ್ಲ ಮಹಿಳೆಯಾಗಿದ್ದು ಮೂರು ಮದುವೆ?

Related Posts

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
0

ಭಾರತವು ಶರಣಾರ್ಥಿಗಳ ವಿಷಯದಲ್ಲಿ ಕ್ರೂರ ರಾಷ್ಟ್ರವೂ ಅಲ್ಲ, ಎಲ್ಲರಿಗೂ ಬಾಗಿಲು ತೆರೆದ ಧರ್ಮಶಾಲೆಯೂ ಅಲ್ಲ. ಅದು ತನ್ನ ಇತಿಹಾಸ, ಭೌಗೋಳಿಕ ಸವಾಲುಗಳು ಮತ್ತು ಆಂತರಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು,...

Read moreDetails
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
Next Post
ಸೈಕೋ ಪತಿ ಕೇಸ್​ಗೆ​​ ಟ್ವಿಸ್ಟ್: ಒಂದಲ್ಲ..ಎರಡಲ್ಲ ಮಹಿಳೆಯಾಗಿದ್ದು ಮೂರು ಮದುವೆ?

ಸೈಕೋ ಪತಿ ಕೇಸ್​ಗೆ​​ ಟ್ವಿಸ್ಟ್: ಒಂದಲ್ಲ..ಎರಡಲ್ಲ ಮಹಿಳೆಯಾಗಿದ್ದು ಮೂರು ಮದುವೆ?

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!