• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Top Story, ಕರ್ನಾಟಕ, ರಾಜಕೀಯ
0
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Share on WhatsAppShare on FacebookShare on Telegram

ಬೆಂಗಳೂರು: ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜೊತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(HD Kumaraswamy)  ಕಾಂಗ್ರೆಸ್(Congress) ಸಚಿವರ ಹೆಚ್‌ಡಿಕೆ ಅವರಿಗೆ ಮಾತನಾಡುವ ಚಪಲ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ADVERTISEMENT
Anant Kumar Hegde ; ನನ್ನ ಮಾತು ಮೊನಚಾದರೆ ಕ್ಷಮಿಸಿಬಿಡಿ, ಇವರಿಗೆ ಇದೇ ಭಾಷೆಯಲ್ಲಿ ಹೇಳಬೇಕು #pratidhvani

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮದೊಂದು ರೀತಿ‌ ಚಪಲ, ನನ್ನದೊಂದು ರೀತಿ ಚಪಲ. ನಿಮ್ಮದು ಹಣ ಮಾಡುವ ಚಪಲ. ನನ್ನದು ನಮ್ಮದು ಜನರ ಸಮ ಸ್ಪಂದಿಸಿ ಅವರ ಬೆಂಬಲ ಪಡೆಯುವ ಚಪಲ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದರು.

ಸ್ವಜಾತಿಯವರಿಂದಲೇ‌ ಅನ್ಯಾಯ ಆಗುತ್ತಿದೆ ಎನ್ನುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿಕೆ ಬಗ್ಗೆ ಮಾತನಾಡಿದ ಅವರು, ನಾನು ಆ ವರದಿಯನ್ನು ನೋಡಿದ್ದೇನೆ. ಕಷ್ಟ ಬಂದ ಜಾತಿ ಅಂತಾರೆ. ಆದರೆ ಅವರು ಅವರು ಪ್ರತಿನಿಧಿಸುವ ಜಾತಿಗೆ ಏನು ಮಾಡಿದ್ದಾರ ಬೆಳಗ್ಗೆಯಿಂದ ಸಂಜೆವರೆಗೂ‌ ಹಣ ಹೊಡೆಯಬೇಕು ಎನ್ನುವವರು ಅವರು. ಬೇಕು ಅಂತಾರೆ. ಜನರ ಬೆಂಬಲ ಯಾವ ರೀತಿ ಪಡೆಯಬೇಕು ಎನ್ನುವುದಕ್ಕಿಂತ ಕ್ಷಣ ಕ್ಷಣವೂ ರಾಜ್ಯದ ಲೂಟಿ ಮಾಡಬೇಕು ಎಂದು ಕೆಲಸ ಮಾಡ್ತಿದ್ದಾರೆ. ಅಂತಹ ವ್ಯಕ್ತಿಗಳಿಗೆ ಜಾತಿ ಹೆಸರಿನಲ್ಲಿ ಬೆಂಬಲ ಕೊಡ್ತಾರಾ? ಎಂದು ಪ್ರಶ್ನಿಸಿದರು.

Nikhil Kumaraswamy on JDS Leaders: ಪಕ್ಷದೊಳಗಿನ ಭಿನ್ನಾಭಿಪ್ರಾಯದ ಬಗ್ಗೆ ನಿಖಿಲ್ ರಿಯಾಕ್ಷನ್ #pratidhvani

ನಾನು ಬಾಯಿ ಚಪಲಕ್ಕೆ ಮಾತಾಡಲ್ಲ. ಇಂಥವರು ನಡೆಸುವ ಅಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ಕೊಡ್ತಿದ್ದೇನೆ ಅಷ್ಟೇ. ನಾನು ಮಾತನಾಡುವುದು ನನ್ನ ಮತ್ತು ಜನತೆಯ ಸಂಬಂಧ ಬೆಳೆಸಿಕೊಳ್ಳಲು. ಈ ಅಣ್ಣ ತಮ್ಮಂದಿರದ್ದು ಕಟ್ಟಿಕೊಂಡು ನನಗೇನಾಗಬೇಕು? ದಿನ ಬೆಳಗಾದರೆ ಯಾರ ತಲೆ ಒಡೆಯಬೇಕು? ಯಾರ ಜಮೀನಿಗೆ ಫೆನ್ಸಿಂಗ್ ಹಾಕಬೇಕು? ಯಾವ ರೀತಿ ಅಕ್ರಮವಾಗಿ ಸಂಪಾದನೆ ಮಾಡಬೇಕು ಎನ್ನುವ ಜಾತಿ ಹೆಸರು ಹೇಳಿದಾಕ್ಷಣ ಬೆಂಬಲ ಕೊಡ್ತಾರ? ಎಂದರು.

ಇದನ್ನೂ ಓದಿ: ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ನಮ್ಮ ಪಕ್ಷದ್ದು ಹಾಗಿರಲಿ. ಸೋಕಾಲ್ಡ್ ನ್ಯಾಷನಲ್ ಪಾರ್ಟಿ ಕಾಂಗ್ರೆಸ್ ಪಕ್ಷವು ಬಿಹಾರ, ಮಹಾರಾಷ್ಟ್ರದಲ್ಲಿ ಯಾವ ಲೆವೆಲ್ಲಿಗೆ ಬಂದಿದೆ ಎಂಬುದನ್ನು ಮೊದಲು ನೋಡಿಕೊಳ್ಳಿ. ಜೆಡಿಎಸ್ ಬಗ್ಗೆ ಚರ್ಚೆ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಯಾರು? ಅವರ ಸರ್ಟಿಫಿಕೇಟ್ ನಮಗೆ ಬೇಕಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮಂತ್ರಿಗಳು ಎಷ್ಟು ಜನ ಜೆಡಿಎಸ್‌ನಿಂದ ಲೀಸ್ ಮೇಲೆ ಹೋಗಿದ್ದಾರೆ ಎನ್ನುವುದನ್ನು ಮೊದಲು ಅವರಪ್ಪನನ್ನು ಕೇಳಿ ತಿಳಿದುಕೊಳ್ಳಲಿ. ಮುಖ್ಯಮಂತ್ರಿಗಳಿಂದ ಹಿಡಿದು ಎಷ್ಟು ಜನ ಮಂತ್ರಿಗಳು ಜೆಡಿಎಸ್ ಮೂಲದವರು? ಗೊತ್ತಿದೆಯಾ? ಎಂದು ಕಿಡಿಕಾರಿದರು.

Krishna Byre Gowda : ಜನರಿಗೆ ಬುದ್ಧಿವಾದ ಹೇಳಿದ ಸಚಿವ ಕೃಷ್ಣಭೈರೇಗೌಡ..! #hasan #pratidhvani

ಮಿಸ್ಟರ್ ಖರ್ಗೆ ಅವರೇ, ಮೊದಲು ನಿಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳಿ. ನಿಮ್ಮ ಪಕ್ಷದಲ್ಲಿ ಸದ್ಯಕ್ಕೆ ಒಬ್ಬರ ‘ಲೀಸ್ ಅವಧಿ ಮುಗಿದಿದೆ. ನನ್ನನ್ನು ಲೀಸ್ ಮೇಲೆ ಮುಖ್ಯಮಂತ್ರಿ ಮಾಡಿ’ ಎಂದು ಇನ್ನೊಬ್ಬರು ಟವೆಲ್ ಹಾಕಿದ್ದಾರೆ. ಅವರು ನೋಡಿದರೆ ನನ್ನ ಲೀಸ್‌ ಅವಧಿ ಇನ್ನೂ ಮುಗಿದಿಲ್ಲ. ಬಿಟ್ಟು ಕದಲುವ ಪ್ರಶ್ನೆಯೇ ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಏನು ಮರಿ ಖರ್ಗೆ ಅವರೇ? ಮೊದಲು ನಿಮ್ಮ ಪಕ್ಷದ ಹಣೆಬರಹ ನೋಡಿಕೊಳ್ಳಿ. ನಂತರ ಬೇರೆಯವರ ಬಗ್ಗೆ ಮಾತನಾಡಿ ಎಂದು ಗುಡುಗಿದರು.

ಇವತ್ತು ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದೆ. ಕಾಂಗ್ರೆಸ್ ಎಷ್ಟು ಕಡೆ ಗೆದ್ದಿದೆ. ದುರ ಅಹಂಕಾರ ಬೆಳೆಸಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಪಕ್ಷದ ರಾಜ್ಯದ ಫಲಿತಾಂಶವೇ ಸಾಕ್ಷಿ. ಪ್ರಿಯಾಂಕ್ ಖರ್ಗೆ ಅವರೇ ಇಂಥ ವಿಷಯಗಳ ಬಗ್ಗೆ ಮಾತಾಡುವುದು ಬಿಟ್ಟು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ. ನಿಮ್ಮ, ನಿಮ್ಮ ತಂದೆಯವರು ಪ್ರತಿನಿಧಿಸಿರುವ ಕ್ಷೇತ್ರಗಳ ಪರಿಸ್ಥಿತಿ ಬಗ್ಗೆ ಹೇಳಿ. ಮೈಸೂರು, ಕನಕಪುರ ಮತ್ತು ರಾಮನಗರದಲ್ಲಿ ಆಗಿರುವ ಅಭಿವೃದ್ಧಿ ನಿಮ್ಮ ಕ್ಷೇತ್ರದಲ್ಲಿ ಆಗಿದೆಯೇ? ಹಿರಿಯ ಖರ್ಗೆ ಅವರು 40 ವರ್ಷಕ್ಕೂ ಹೆಚ್ಚು ಕಾಲದಿಂದ ಅಧಿಕಾರದಲ್ಲಿ ಇದ್ದಾರೆ. ನೀವು ಕಳೆದ 8-9 ವರ್ಷದಿಂದ ಮಂತ್ರಿ ಆಗಿದ್ದೀರಿ. ಏನು ಸಾಧನೆ ನಿಮ್ಮದು? ಪಟ್ಟಿ ಕೊಡಿ ನೋಡೋಣ ಎಂದು ಆಗ್ರಹಿಸಿದರು.

Congress Leader Rajeev Gowda Escape | ರಾಜೀವ್‌ ಬಂಧನಕ್ಕೆ ವಿಶೇಷ ತಂಡ ರಚನೆ, #pratidhvani

ಜೆಡಿಎಸ್‌- ಬಿಜೆಪಿ ಮೈತ್ರಿ ಕಾರಣಕ್ಕೆ ನಿಮಗೆ ನಿದ್ದೆ ಬರುತ್ತಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಮ್ಮ ಮೈತ್ರಿಯಿಂದ ನಿಮ್ಮ ಹಣೆಬರಹ 9 ಸೀಟುಗಳಿಗೆ ಬಂದಿದೆ. ನಮ್ಮ ಕೆಲ ದೋಷಗಳಿಂದ ನೀವು 9 ಸೀಟು ಗೆದ್ದಿದ್ದೀರಿ. ಇಲ್ಲದಿದ್ದರೆ ರಾಜ್ಯದಲ್ಲಿ ಅಧಿಕಾರ ಇದ್ದರೂ ನಿಮ್ಮ ನ್ಯಾಷನಲ್ ಪಾರ್ಟಿ 3 ಅಥವಾ 4 ಸೀಟುಗಳಿಗೆ ಇಳಿಯುತ್ತಿತ್ತು. ಜೆಡಿಎಸ್ ಪಕ್ಷ ಅಸ್ತಿತ್ವ ಕಳೆದುಕೊಳ್ಳುತ್ತಿದೆಯೋ ಅಥವಾ ಕಾಂಗ್ರೆಸ್ ಪಕ್ಷ ನಾಶ ಆಗುತ್ತಿದೆಯೋ? ಹೇಳುವಿರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Tags: BJPcongressDK ShivakumarHD KumaraswamyKarnatakaKarnataka PoliticsPoliticsPriyank Kharge
Previous Post

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

Next Post

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

Related Posts

ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
0

ಮೈಸೂರು: ಬಳ್ಳಾರಿ,(Ballari) ಶಿಡ್ಲಘಟ್ಟ ಬ್ಯಾನರ್‌ ವಿವಾದದ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ(CM Siddaramaiah) ತವರು ಜಿಲ್ಲೆ ಮೈಸೂರಲ್ಲೇ ಫ್ಲೆಕ್ಸ್ ಗಲಾಟೆ ಆರಂಭವಾಗಿದೆ. ಮೈಸೂರು(Mysuru) ಜಿಲ್ಲೆಯ ಕೆ.ಆರ್ ನಗರ...

Read moreDetails
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
Next Post
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

Recent News

ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!