ಕರ್ನಾಟಕದಿಂದ ೨ನೇ ಬಾರಿ ರಾಜ್ಯಸಭೆಗೆ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಜೂನ್ ೩ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ತೋಟಗಾರಿಕೆ ಸಚಿವ ಮುನಿರತ್ನ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.