• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

Any Mind by Any Mind
May 18, 2022
in ಕರ್ನಾಟಕ
0
ಕೋವಿಡ್‌ನಿಂದ ಗುಣಮುಖರಾಗಿರುವವರು ಕಡ್ಡಾಯವಾಗಿ ಟಿ ಬಿ ತಪಾಸನೆಯನ್ನು ಮಾಡಿಸಿಕೊಳ್ಳಿ : ಸಚಿವ ಸುಧಾಕರ್

Dr K Sudhakar, Medical Education Minister addressing press regarding Arogya Sethu App and Covid-19 lockdown, Coronavirus at Vidhana Soudha in Bengaluru on Thursday, 21 May 2020. Photo by S K Dinesh

Share on WhatsAppShare on FacebookShare on Telegram

ರಾಜ್ಯದ ಆರೋಗ್ಯ ಕ್ಷೇತ್ರದ ಮತ್ತಷ್ಟು ಬಲವರ್ಧನೆಗಾಗಿ ಏಮ್ಸ್ ಸಂಸ್ಥೆಯನ್ನು ಆರಂಭಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವೀಯ, ಏಮ್ಸ್ ಸ್ಥಾಪನೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ADVERTISEMENT

ರಾಜ್ಯದ ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರುವ ಉದ್ದೇಶದಿಂದ ಏಮ್ಸ್ ಸಂಸ್ಥೆಯೊಂದನ್ನು ಆರಂಭಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರ ಸಾಕಷ್ಟು ಬೆಳೆದಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣ ಪಡೆದು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯರಾಗುವ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಲು ಏಮ್ಸ್ ಸಂಸ್ಥೆ ಸ್ಥಾಪಿಸುವುದು ಸೂಕ್ತವಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಉತ್ತರ ತಾಲೂಕಿನಲ್ಲಿ ನಿಮ್ಹಾನ್ಸ್ ಕ್ಯಾಂಪಸ್

ಕೇಂದ್ರ ಸಚಿವರನ್ನು ಭೇಟಿಯಾದ ವೇಳೆ ನಿಮ್ಹಾನ್ಸ್ ಸಂಸ್ಥೆಯ ಹೊಸ ಕ್ಯಾಂಪಸ್ ನಿರ್ಮಾಣ ಕುರಿತು ಸಚಿವ ಡಾ.ಕೆ.ಸುಧಾಕರ್ ಚರ್ಚೆ ನಡೆಸಿದರು.

2021 ರಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಇದರ ಬದಲು, ನಿಮ್ಹಾನ್ಸ್ ಪಿಜಿ ಸಂಸ್ಥೆ ಆರಂಭಿಸುವಂತೆ ಆರ್ಥಿಕ ಸ್ಥಾಯಿ ಸಮಿತಿ ಸಲಹೆ ನೀಡಿತ್ತು. ಅದರಂತೆ, 2,100 ಕೋಟಿ ರೂ. ವೆಚ್ಚದಲ್ಲಿ 2,344 ಹಾಸಿಗೆಯ ಕಟ್ಟಡ ಹಾಗೂ ಪಿಜಿ ಕೇಂದ್ರವನ್ನು 8 ವರ್ಷಗಳಲ್ಲಿ ನಿರ್ಮಿಸುವ ಪ್ರಸ್ತಾವವನ್ನು 2022 ರ ಫೆಬ್ರವರಿಯಲ್ಲಿ ಸಲ್ಲಿಸಲಾಗಿತ್ತು. ಆದರೆ ಇದನ್ನು ಪರಿಷ್ಕರಿಸುವಂತೆ ಸಮಿತಿಯು ಸಲಹೆ ನೀಡಿತ್ತು. ಆದ್ದರಿಂದ 538 ಹಾಸಿಗೆಗಳ ಪಾಲಿ ಟ್ರಾಮಾ ಕೇಂದ್ರ ಹಾಗೂ ಪಿಜಿ ಸೆಂಟರ್ ನಿರ್ಮಿಸುವ ಡಿಪಿಆರ್ ಸಿದ್ಧಪಡಿಸಿ ನೀಡಲಾಗಿದೆ. ಈ ಯೋಜನೆಯಲ್ಲಿ ಕಟ್ಟಡ ನಿರ್ಮಾಣಕ್ಕೆ 489 ಕೋಟಿ ರೂ. ಖರ್ಚಾಗಲಿದ್ದು, 260.76 ಕೋಟಿ ರೂ. ವೈದ್ಯಕೀಯ ಉಪಕರಣಗಳಿಗೆ ಹಾಗೂ ವಾರ್ಷಿಕ 159 ಕೋಟಿ ರೂ. ಮಾನವ ಸಂಪನ್ಮೂಲಕ್ಕೆ ಖರ್ಚಾಗಲಿದೆ.

“ರಾಜ್ಯಕ್ಕೆ ಏಮ್ಸ್ ಸಂಸ್ಥೆಯನ್ನು ನೀಡಲು ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರಕ್ಕೆ, ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಸಂಸ್ಥೆಯು ರಾಜ್ಯದಲ್ಲಿ ಸ್ಥಾಪನೆಯಾದರೆ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮತ್ತಷ್ಟು ಮುಂಚೂಣಿಗೆ ಬರಲು ಹಾಗೂ ರಾಜ್ಯದ ಜನರಿಗೆ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯಲು ಸಹಾಯಕವಾಗಲಿದೆ” ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸಚಿವರು ಸಲ್ಲಿಸಿದ ಇತರೆ ಮನವಿಗಳು

ನರ್ಸಿಂಗ್ ಹಾಗೂ ಅಲೈಡ್ ಆರೋಗ್ಯ ವಿಜ್ಞಾನಗಳು, ಆರೋಗ್ಯ ಸೇವೆ ನೀಡುವಲ್ಲಿ ಮುಖ್ಯ ಪಾತ್ರ ವಹಿಸಿವೆ. ಇದಕ್ಕಾಗಿ ರಾಜ್ಯಮಟ್ಟದಲ್ಲಿ *ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸುವುದು ಈಗಿನ ಅಗತ್ಯವಾಗಿದೆ.

ಆಸ್ಪತ್ರೆಗಳ ಆಡಳಿತ ನಿರ್ವಹಣೆಯ ಬಗ್ಗೆ ವೈದ್ಯರಿಗೆ ತರಬೇತಿ ನೀಡುವುದು ಅವಶ್ಯಕ. ವೈದ್ಯರ ತರಬೇತಿ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಆಡಳಿತದ ಪಠ್ಯವನ್ನು ಕೂಡ ಸೇರಿಸಬೇಕಿದೆ. ಇದರಲ್ಲಿ ಪಿಪಿಪಿ ಮಾದರಿಯನ್ನು ಅನುಸರಿಸಬಹುದು.

ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನೀಡುವ ಅನುದಾನವು ಖಾಸಗಿ ಮೆಡಿಕಲ್ ಕಾಲೇಜುಗಳನ್ನು ಹೊಂದಿರದ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಈ ನಿಯಮವನ್ನು ಸಡಿಲಿಸಿದರೆ ಸೂಕ್ತ.

ಸೀಟು ಹಂಚಿಕೆ ವೇಳೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರತ್ಯೇಕ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತದೆ. ಇಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ ಇರುವುದಿಲ್ಲ. ಈ ನಿಯಮವನ್ನು ಬದಲಿಸಿ *ಸ್ಥಳೀಯ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಕ್ರಮ ವಹಿಸಬೇಕಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಫಾರ್ಮಸಿ ಕ್ಷೇತ್ರಗಳಲ್ಲಿ ಅಂತರಾಷ್ಟ್ರೀಯ ಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮ ರೂಪಿಸುವ ಅಗತ್ಯವಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರೂಪಿಸಿವ ಯೋಜನೆಗಳಲ್ಲಿ ಸ್ಥಳೀಯ ಹಾಗೂ ಪ್ರಾದೇಶಿಕ ಆರೋಗ್ಯ ಸಮಸ್ಯೆಗಳಿಗೆ ಒತ್ತು ನೀಡಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು.

Tags: BJPCongress PartyCovid 19ಏಮ್ಸ್ಡಾ.ಕೆ. ಸುಧಾಕರ್ನರೇಂದ್ರ ಮೋದಿಬಿಜೆಪಿ
Previous Post

ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

Next Post

5ನೇ ಬಾರಿ 500 ಪೂರೈಸಿ ಕೊಹ್ಲಿ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್!

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಕೆಎಲ್‌ ರಾಹುಲ್‌ ಶತಕ; ಮುಂಬೈಗೆ 200 ರನ್‌ ಗುರಿ!

5ನೇ ಬಾರಿ 500 ಪೂರೈಸಿ ಕೊಹ್ಲಿ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್!

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada