• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ರಾಜಕೀಯ, ವಿಶೇಷ
0
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .

ADVERTISEMENT

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

• ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.

• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.

• ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.

• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಸಿಎಂ ಅಸ್ತ್ರಕ್ಕೆ ಸಿಎಂ ದಾಳ.. ತಿರುಗಿಸಿ ಕೊಟ್ಟ ಸಿಎಂ ಟೀಂ..

Next Post

Coconut oil benefits: ತೆಂಗಿನ ಎಣ್ಣೆಯಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
Coconut oil benefits: ತೆಂಗಿನ ಎಣ್ಣೆಯಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.!

Coconut oil benefits: ತೆಂಗಿನ ಎಣ್ಣೆಯಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada