ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಡಿಸಿಎಂ ಡಿ.ಕೆ ಶಿವಕುಮಾರ್(D.K Shivakumar) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರ್ಕಾರದ ಪಾಲೇನು? ಇದರ ತೀರ್ಮಾನ ಮಾಡುವವರು ಯಾರು? ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.

ನೀರಾವರಿ ಸಮಸ್ಯೆ ಹಾಗೂ ಯೋಜನೆ ಅನುಷ್ಠಾನದ ಬಗ್ಗೆ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆ ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ, ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ ಎಂದು ತಿಳಿಸಿದರು.












