ದೇಶದಲ್ಲಿ ದಿನದಿಂದ ದಿನಕ್ಕೆ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆಯೂ ಆರೋಗ್ಯ ವಿಜ್ಞಾನಗಳ ಮಹಾನಿರ್ದೇಶನಾಲಯ (DGHS) ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದೆ.
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (NCDC) ಹಾಗೂ ಐಸಿಎಂಆರ್ ಅಧಿಕಾರಿಗಳು ಸಹ ಸಭೆಯಲ್ಲಿ ಹಾಜರಿದ್ದರು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಾವುದೇ ವಿದೇಶಿ ಪ್ರಯಾಣದ ಇತಿಹಾಸವಿಲ್ಲದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸೋಂಕು ಇನ್ನಷ್ಟು ಹರಡದಂತೆ ತಡೆಯಲು ಮುನ್ನೆಚರಿಕ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಸಭೆ ನಡೆಸಲಾಗಿದೆ.