ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದು, ಕೇಂದ್ರವು ಪ್ರಸ್ತುತ ನೀಡುತ್ತಿರುವ ದೈನಂದಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶ ಮಾಡಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲ್ಲೇರಿದ್ದು, ಕರ್ನಾಟಕ ಹೈಕೋರ್ಟ್ ಆದೇಶವನ್ನು ತಡೆಯುವಂತೆ ಕೋರಿದೆ.
ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ನ್ಯಾಯಪೀಠವುಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಸ್ತುತ ರಾಜ್ಯಕ್ಕೆ 965 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಲಾಗುತ್ತಿದೆ. ಹೈಕೋರ್ಟ್ ಆದೇಶವನ್ನು ತುರ್ತಾಗಿ ತಡೆಹಿಡಿಯ ಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸುವ ಮೊದಲು ಸೂಕ್ತ ಕಾಗದದ ದಾಖಲೆಗಳನ್ನು ಪರಿಶೀಲಿಸಬೇಕೆಂದು ತಿಳಿಸಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರದಿಂದ ಹಂಚಿಕೆ ಆಗುತ್ತಿರುವುದು ಕೇವಲ 865 ಮೆಟ್ರಿಕ್ ಟನ್ ಆಕ್ಸಿಜನ್ ಆದರೆ ಕರ್ನಾಟಕದ ಯೋಜಿತ ಬೇಡಿಕೆ 1,471 ಮೆಟ್ರಿಕ್ ಟನ್ ಆಗಿದೆ, ಆಮ್ಲಜನಕ ಇಲ್ಲದೆ ಜನ ಸಾಯುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಸಂಸದರು ಮೂಕಪ್ರೇಕ್ಷಿತರಾಗಿ ಕುಳಿತಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಆಕ್ಸಿಜನ್ ಕೊರತೆಯಾಗುತ್ತಿರುವುದ ಬಗ್ಗೆ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಅವರು ಮೇ 4 ರಂದು ಪ್ರಧಾನಿ ಮೋದಿಗೆ ಪತ್ರಬರೆದ್ದು, ರಾಜ್ಯದಲ್ಲಿ ಆಮ್ಲಜನಕದ ಬಿಕ್ಕಟ್ಟು ತೀವ್ರವಾಗಿದ್ದು, ಮುಂದಿನ ದುರಂತವನ್ನು ತಡೆಗಟ್ಟಲು ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಹಸ್ತಕ್ಷೇಪ ಮಾಡಬೇಕೆಂದು ಕೋರಿದ್ದರು.