• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಸೇರಿ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ!

Any Mind by Any Mind
October 10, 2021
in ಕರ್ನಾಟಕ, ದೇಶ
0
ಕರ್ನಾಟಕ ಸೇರಿ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ!
Share on WhatsAppShare on FacebookShare on Telegram

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರಿತು ರಾಜ್ ಅವಸ್ತಿ ಅವರ ನೇಮಕಾತಿಯೂ ಸೇರಿದಂತೆ ದೇಶಾದ್ಯಂತ ವಿವಿಧ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ. ಐವರು ಮುಖ್ಯ ನ್ಯಾಯಮೂರ್ತಿಗಳನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದ್ದು, ಎಂಟು ಹೈಕೋರ್ಟ್‌ಗಳಿಗೆ ಹಿರಿಯ ನ್ಯಾಯಮೂರ್ತಿಗಳಾಗಿದ್ದವರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಪದನೋನ್ನತಿ ನೀಡಲಾಗಿದೆ. ಸೆಪ್ಟೆಂಬರ್‌ 16ರಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾಯಮೂರ್ತಿಗಳ ವರ್ಗಾವಣೆಗೆ ಶಿಫಾರಸ್ಸು ಮಾಡಿತ್ತು.

ADVERTISEMENT

ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಆಗಿ ನೇಮಕ ಮಾಡಲಾಗಿದೆ. ಹಾಗೆಯೇ, ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಕನ್ನಡಿಗ ನ್ಯಾಯಮೂರ್ತಿ ರವಿ ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾ. ರವಿ ವಿ. ಮಳಿಮಠ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ನ್ಯಾ. ರಿತು ರಾಜ್ ಅವಸ್ತಿ ಹಿನ್ನೆಲೆ.!!

ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿರುವ ರಿತು ರಾಜ್ ಅವಸ್ತಿ 1960ರ ಜುಲೈ 3ರಂದು ಜನಿಸಿದ್ದಾರೆ. ಲಕ್ನೋ ವಿಶ್ವವಿದ್ಯಾಲಯದಿಂದ 1986ರಲ್ಲಿ ಕಾನೂನು ಪದವಿ ಪಡೆದು, 1987ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿರುವ ಇವರು ಸಿವಿಲ್, ಶಿಕ್ಷಣ ಹಾಗೂ ಸೇವಾ ವಿಷಯಗಳಲ್ಲಿ ಹೆಚ್ಚಿನ ಪರಿಣಿತಿ ಹೊಂದಿದ್ದಾರೆ. ಕೇಂದ್ರ ಸರ್ಕಾರದ ಪರ ಸಹಾಯಕ ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 2009ರ ಏಪ್ರಿಲ್ 13ರಿಂದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಇವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್ ಕಳದ ತಿಂಗಳು ಶಿಫಾರಸು ಮಾಡಿತ್ತು. ಸದ್ಯ ರಾಜ್ಯ ಹೈಕೋರ್ಟ್ ನ ಸಿಜೆ ಹುದ್ದೆಗೆ ನೇಮಕಗೊಂಡಿರುವ ನ್ಯಾ. ರಿತುರಾಜ್ ಅವಸ್ತಿ 2022ರ ಜುಲೈ 2ರಂದು ನಿವೃತ್ತಿ ಹೊಂದಲಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳಾಗಿ ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ವರ್ಗಾವಣೆಗೊಂಡ ನ್ಯಾಯಮೂರ್ತಿಗಳ ಪಟ್ಟಿ:

·         ನ್ಯಾ. ಅಖಿಲ್‌ ಖುರೇಷಿ – ತ್ರಿಪುರದಿಂದ ರಾಜಸ್ಥಾನ

·         ನ್ಯಾ. ಇಂದ್ರಜಿತ್‌ ಮಹಂತಿ – ರಾಜಸ್ಥಾನದಿಂದ ತ್ರಿಪುರ

·         ನ್ಯಾ. ಮೊಹಮ್ಮದ್‌ ರಫೀಕ್‌ – ಮಧ್ಯಪ್ರದೇಶದಿಂದ ಹಿಮಾಚಲ ಪ್ರದೇಶ

·         ನ್ಯಾ. ಅರುಪ್‌ ಕುಮಾರ್‌ ಗೋಸ್ವಾಮಿ – ಆಂಧ್ರಪ್ರದೇಶದಿಂದ ಚತ್ತೀಸಗಢ

·         ನ್ಯಾ. ಬಿಸ್ವನಾಥ್ ಸೋಮದ್ದರ್‌ – ಮೇಘಾಲಯದಿಂದ ಸಿಕ್ಕಿಂ

8 ಹಿರಿಯ ನ್ಯಾಯಮೂರ್ತಿಗಳನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ಆ ಪಟ್ಟಿ ಇಂತಿದೆ:

·         ನ್ಯಾ. ರಿತು ರಾಜ್‌ ಅವಸ್ತಿ – ಕರ್ನಾಟಕ ಹೈಕೋರ್ಟ್‌

·         ನ್ಯಾ. ರಾಜೇಶ್‌ ಬಿಂದಾಲ್‌  – ಅಲಾಹಾಬಾದ್‌

·         ನ್ಯಾ. ಪ್ರಕಾಶ್‌ ಶ್ರೀವಾಸ್ತವ – ಕಲ್ಕತ್ತಾ

·         ನ್ಯಾ. ಪಿ ಕೆ ಮಿಶ್ರಾ  – ಆಂಧ್ರ ಪ್ರದೇಶ

·         ನ್ಯಾ. ಸತೀಶ್‌ ಚಂದ್ರ ಶರ್ಮಾ  – ತೆಲಂಗಾಣ

·         ನ್ಯಾ. ಅರವಿಂದ್‌ ಕುಮಾರ್‌  – ಗುಜರಾತ್‌

·         ನ್ಯಾ. ಆರ್‌ ವಿ ಮಳಿಮಠ  – ಮಧ್ಯಪ್ರದೇಶ

·         ನ್ಯಾ. ರಂಜಿತ್‌ ವಿ ಮೋರೆ  – ಮೇಘಾಲಯ

Tags: 13Centre Notifies AppointmentElevationHigh CourtsNew Chief Justicestransfer
Previous Post

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನಿರಾಕರಿಸುವಂತಿಲ್ಲ: ಸುಪ್ರೀಂಕೋರ್ಟ್!

Next Post

ಲಖೀಂಪುರ್‌ ಹಿಂಸಾಚಾರ : ಪತ್ರಕರ್ತ ರಾಮನ್‌ ಕಶ್ಯಪ್‌ ಮೇಲೆ ಹರಿದ ಸಚಿವನ ಪುತ್ರನ ಕಾರು : ಪ್ರತ್ಯಕ್ಷ್ಯದರ್ಶಿ!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಲಖೀಂಪುರ್‌ ಹಿಂಸಾಚಾರ : ಪತ್ರಕರ್ತ ರಾಮನ್‌ ಕಶ್ಯಪ್‌ ಮೇಲೆ ಹರಿದ ಸಚಿವನ ಪುತ್ರನ ಕಾರು : ಪ್ರತ್ಯಕ್ಷ್ಯದರ್ಶಿ!

ಲಖೀಂಪುರ್‌ ಹಿಂಸಾಚಾರ : ಪತ್ರಕರ್ತ ರಾಮನ್‌ ಕಶ್ಯಪ್‌ ಮೇಲೆ ಹರಿದ ಸಚಿವನ ಪುತ್ರನ ಕಾರು : ಪ್ರತ್ಯಕ್ಷ್ಯದರ್ಶಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada