• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲಸಿಕೆ ಖರೀದಿಸಲು ಸಾಲಕ್ಕೆ ಬೇಡಿಕೆಯಿಟ್ಟ ಕೇಂದ್ರ ; PM-CARES ನಿಧಿ ಎಲ್ಲಿ ಹೋಯಿತು?

Shivakumar A by Shivakumar A
November 5, 2021
in ದೇಶ, ರಾಜಕೀಯ
0
ಲಸಿಕೆ ಖರೀದಿಸಲು ಸಾಲಕ್ಕೆ ಬೇಡಿಕೆಯಿಟ್ಟ ಕೇಂದ್ರ ; PM-CARES ನಿಧಿ ಎಲ್ಲಿ ಹೋಯಿತು?
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ ಬ್ಯಾಂಕುಗಳಿಮದ ಸಾಲ ಪಡೆಯಲು ಮುಂದಾಗಿದೆ. ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ‘ಸುರಕ್ಷಿತ ಹಾಗೂ ಪರಿಣಾಮಕಾರಿ ಕೋವಿಡ್ ಲಸಿಕೆ’ ಪಡೆಯಲು 500 ಮಿಲಿಯನ್ ಡಾಲರ್ ಮೊತ್ತದ ಸಾಲ ಕೇಳಿದೆ!

ADVERTISEMENT

ಇದಲ್ಲದೇ, ಏಷಿಯಾ ಪೆಸಿಫಿಕ್ ವ್ಯಾಕ್ಸಿನ್ ಆ್ಯಕ್ಸೆಸ್ ಫೆಸಿಲಿಟಿ ಪ್ರೋಗ್ರಾಂ (Asia Pacific Vaccine Access Facility programme) ಅಡಿಯಲ್ಲಿ ಕೂಡಾ ನಾಲ್ಕು ಮಿಲಿಯನ್ ಡಾಲರ್  ಸಾಲವನ್ನು ಭಾರತ ಪಡೆಯಲಿದೆ. ಈ ಸಾಲವನ್ನು ತಾಂತ್ರಿಕ ವಿಭಾಗಗಳಾದ ಲಸಿಕಾ ಕೇಂದ್ರಗಳ ಅಭಿವೃದ್ದಿ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಬಳಸಲಾಗುವುದು. 

ಅಂದಹಾಗೆ ಲಸಿಕೆಗಳಿಗಾಗಿ ಭಾರತ ಮಾಡಿರುವುದು ಕೇವಲ ಇಷ್ಟು ಮಾತ್ರ ಸಾವಲ್ಲ. ಇದಕ್ಕು ಮೊದಲು ಏಷಿಯನ್ ಡೆವೆಲಪ್ಮೆಂಟ್ ಬ್ಯಾಂಕಿನಿಂದ ಲಸಿಕೆ ಖರೀದಿಗಾಗಿ 1.5 ಬಿಲಿಯನ್  ಡಾಲರ್ ಮೊತ್ತದ ಹಣ, ಸಾಲದ ರೂಪದಲ್ಲಿ ಭಾರತಕ್ಕೆ ಸಿಗಲಿದೆ. 670  ಮಿಲಿಯನ್ ಡೋಸ್ ಲಸಿಕೆ ಖರೀದಿಸಲು ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ಸಾಲ  ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ. 

ಈವರೆಗೆ ಲಸಿಕಾ ಅಭಿಯಾನಕ್ಕೆ ಸರ್ಕಾರ ಎಷ್ಟು ಮೊತ್ತವನ್ನು ವ್ಯಯಿಸಿದೆ ಎಂಬ ಕುರಿತು ಅಧಿಕೃತ ಅಂಕಿ ಅಂಶಗಳು ಲಭ್ಯವಿಲ್ಲ. ಆದರೆ, ಸರ್ಕಾರವು ಒಂದು ಬಿಲಿಯನ್ ಡೋಸ್ ಲಸಿಕೆಗೆ ಅಂದಾಜು ರೂ.19,000 ಖರ್ಚು ಮಾಡಿದೆ. ಸುಪ್ರೀಂ ಕೋರ್ಟ್’ಗೆ ಸರ್ಕಾರ ನೀಡಿರುವ ಅಫಿಡವಿಟ್ ಹಾಗೂ ಪಾರ್ಲಿಮೆಂಟ್’ನಲ್ಲಿ ಸಚಿವರು ನೀಡಿರುವ ಉತ್ತರದ ಆಧಾರದ ಮೇಲೆ ಈ ಅಂದಾಜು ಲೆಕ್ಕ ಹಾಕಲಾಗಿದೆ. 

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿತ್ತು. ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು. ಆದರೆ, ಲಸಿಕೆ ಪಡೆಯಲು ಭಾರತ ಅಂತರರಾಷ್ಟ್ರೀಯ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅಗತ್ಯವಿತ್ತೇ? 

ಎಲ್ಲಿ ಹೋಯಿತು PM CARES ನಿಧಿ?

2020ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಪಿಎಂ ಕೇರ್ಸ್ ನಿಧಿ ತೆರೆದಿರುವ ಘೋಷಣೆ ಮಾಡಿದರು. ಸಿಎಸ್ಆರ್ ನಿಧಿಯ ಹಣವನ್ನು ಪಿಎಂ ಕೇರ್ಸ್’ಗೆ ನೀಡಿದ್ದಲ್ಲಿ ಅಂತಹ ಕಂಪನಿಗಳಿಗೆ ತೆರಿಗೆ ವಿನಾಯಿತಿಯನ್ನೂ ಘೋಷಿಸಿದರು. ಆದರೆ, ಇದೊಂದು ಖಾಸಗಿ ಟ್ರಸ್ಟ್, ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಹೇಳಿ ನಿಧಿಯ ಪಾರದರ್ಶಕತೆಗೆ ಪರದೆ ಮುಚ್ಚಿದ್ರು. 

ಹಲವು ಸಂಸ್ಥೆಗಳು ನೀಡಿರುವ ವರದಿಯ ಪ್ರಕಾರ ಕೇವಲ 52 ದಿನಗಳಲ್ಲಿ ಈ ನಿಧಿಗೆ ಬರೋಬ್ಬರಿ 1.27 ಬಿಲಿಯನ್ ಡಾಲರ್ ಹಣ ಹರಿದು ಬಂದಿತ್ತು. ಇದು ಕೇವಲ ಬೃಹತ್ ಕಾರ್ಪೊರೇಟ್ ಕಂಪನಿ ಹಾಗೂ ಕೇಂದ್ರ ಸರ್ಕಾರದ ನೌಕರರ ಒಂದು ದಿನದ ಸಂಬಳದ ದೇಣಿಗೆಯ ಅಂದಾಜು ಲೆಕ್ಕಾಚಾರವಷ್ಟೇ. ವೈಯಕ್ತಿಕವಾಗಿ ನೀಡಿರುವ ದೇಣಿಗೆ ಮತ್ತು ಸಣ್ಣ ಪುಟ್ಟ ಸಂಸ್ಥೆಗಳ ದೇಣಿಗೆ ಇದರಲ್ಲಿ ಸೇರಿಲ್ಲ. 

ಪ್ರಧಾನ ಮಂತ್ರಿ ಪರಿಹಾರ ನಿಧಿ ಎಂಬ ಖಾತೆ ನೇರವಾಗಿ ಪ್ರಧಾನಿ ಕಚೇರಿಯಡಿ ಕಾರ್ಯನಿರ್ವಹಿಸುತ್ತಿದ್ದರೂ, ಅದನ್ನು ಪರಿಗಣಿಸಲಾಗಿಲ್ಲ. 2019ರ ಡಿಸೆಂಬರ್ ವೇಳೆಗೆ PMNRF  ನಿಧಿಯಲ್ಲಿ ರೂ. 3,800 ಕೋಟಿ ಹಣ ವಿನಿಯೋಗವಾಗದೇ ಉಳಿದುಕೊಂಡಿದ್ದು. 

ಇದರ ಖರ್ಚು ವೆಚ್ಚಗಳ ಲೆಕ್ಕವನ್ನು ಕೇಳಿ ನೂರಾರು RTI ಅರ್ಜಿಗಳನ್ನು ಸಲ್ಲಿಸಲಾಗಿದೆಯಾದರೂ, ಇನ್ನೂ ಒಂದೇ ಒಂದು ಅರ್ಜಿಗೆ ಸಮರ್ಪಕ ಉತ್ತರವನ್ನು ಸರ್ಕಾರ ನೀಡಿಲ್ಲ. ಇದೊಂದು ಖಾಸಗಿ ಟ್ರಸ್ಟ್, ಹಾಗಾಗಿ ಇದನ್ನು RTI ಅಡಿ ಪರಿಗಣಿಸಲಾಗುವುದಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಉತ್ತರಿಸಿದೆ. 

ಪಿಎಂ ಕೇರ್ಸ್ ಅಧಿಕೃತ ಜಾಲತಾಣದಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಈವರೆಗೆ ರೂ.3100 ಕೋಟಿಯನ್ನು ವೆಂಟಿಲೇಟರ್ ಖರೀದಿ ಹಾಗೂ ವಲಸೆ ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಲಾಗಿದೆ. ಈ ಮಾಹಿತಿಯ ಹೊರತಾಗಿ ಬೇರೆ ಯಾವುದೇ ಮಾಹಿತಿ ಜಾಲತಾಣದಲ್ಲಿ ಲಭ್ಯವಿಲ್ಲ. 

ಈಗ ಲಸಿಕೆ ಪಡೆಯಲು ಕೇಂದ್ರ ಸರ್ಕಾರ ಸಾಲ ಪಡೆಯುತ್ತಿರುವುದರಿಂದ ದೇಶದ ಮೇಲಿನ ಸಾಲದ ಹೊರೆ ಮತ್ತಷ್ಟು ಹೆಚ್ಚಾಗಲಿದೆ. ಮಾರ್ಚ್ 31ರ ವೇಳೆಗೆ ದೇಶದ ಒಟ್ಟು ಸಾಲ 571 ಬಿಲಿಯನ್ ಡಾಲರ್’ಗೆ ತಲುಪಿತ್ತು. ಮಾರ್ಚ್ 2020ರ ಬಳಿಕ 1.6 ಬಿಲಿಯನ್ ಡಾಲರ್ ಹೆಚ್ಚಳವಾಗಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. 

ಹೀಗೆ, ಪಾರದರ್ಶಕತೆ ಇಲ್ಲದ ಪಿಎಂ ಕೇರ್ಸ್ ನಿಧಿ, ಅವೈಜ್ಞಾನಿಕ ತೈಲ ಬೆಲೆ ಏರಿಕೆಗಳಿಂದ ಕೊಟ್ಯಾಂತರ ರೂ. ಆದಾಯವನ್ನು ಸರ್ಕಾರ ಪಡೆಯುತ್ತಿದ್ದರೂ ಲಸಿಕೆಗಳನ್ನು ಖರೀದಿಸಲು ಮತ್ತೆ ಸಾಲದ ಅಗತ್ಯವಿದೆಯೇ ಎಂಬ ಪ್ರಶ್ನೆ ನಿಜಕ್ಕೂ ಕಾಡುತ್ತಿದೆ. ಎಲ್ಲರಿಗೂ ಉಚಿತ ಲಸಿಕೆ ನೀಡುತ್ತಿದ್ದೇವೆ ಎಂಬ ಕಾರಣ ನೀಡಿ ದೇಶದ ಜನರ ಮೇಲೆ ಇನ್ನೆಷ್ಟು ಹೊರೆ ಹೊರಿಸಲು ಈ ಸರ್ಕಾರ ಹೊರಟಿದೆ ಎಂಬುದು ಕೂಡಾ ನಿಗೂಢವಾಗಿದೆ. 

Tags: BJPCovid 19LoanPM Cares fundPM-CARESprocurementvaccineಕರೋನಾಕೇಂದ್ರಕೋವಿಡ್-19ನರೇಂದ್ರ ಮೋದಿನಿಧಿಬಿಜೆಪಿಲಸಿಕೆ ಖರೀದಿ
Previous Post

ಪೆಟ್ರೋಲ್, ಡಿಸೇಲ್ ತೆರಿಗೆ ಕಡಿತದಿಂದ ಸರ್ಕಾರಕ್ಕೆ “ನಷ್ಟ”ವಾಗುವುದಾದರೂ ಹೇಗೆ?

Next Post

ಉಪಚುನಾವಣೆ ಸೋಲು : ಸಿಎಂ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಕೇಳಿದ ಐದು ಪ್ರಶ್ನೆಗಳೇನು?

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಉಪಚುನಾವಣೆ ಸೋಲು : ಸಿಎಂ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಕೇಳಿದ ಐದು ಪ್ರಶ್ನೆಗಳೇನು?

ಉಪಚುನಾವಣೆ ಸೋಲು : ಸಿಎಂ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಕೇಳಿದ ಐದು ಪ್ರಶ್ನೆಗಳೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada