• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

IRS ಅಧಿಕಾರಿ ಪುನೀತ್ ಕುಟ್ಟಯ್ಯ ಅವರಿಗೆ ಶ್ರೇಷ್ಠತಾ ಪ್ರಮಾಣ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
August 24, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೊಸದಿಲ್ಲಿ(,New Delhi):ಹೈದರಾಬಾದ್‌ನಲ್ಲಿ ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಉಪನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕೊಡಗು ಮೂಲದ ಐಆರ್‌ಎಸ್ ಅಧಿಕಾರಿ ಮುಕ್ಕಾಟಿರ ಪುನಿತ್ ಕುಟ್ಟಯ್ಯ ಅವರು ರೂ. ೩,೦೦೦ ಕೋಟಿ( IRS officer Mukkathira Punit Kuttayya said Rs. 3,000 crore)ವಂಚನೆಯನ್ನು ಪತ್ತೆ ಹಚ್ಚಿದ ತಂಡದ ಭಾಗವಾಗಿದ್ದಕ್ಕಾಗಿ ಕೇಂದ್ರ ಸರ್ಕಾರದಿಂದ ಶ್ರೇಷ್ಠತೆಯ ಪ್ರಮಾಣಪತ್ರವನ್ನು ಪಡೆದಿದ್ದಾರೆ.

ADVERTISEMENT

ಆಗಸ್ಟ್ ೨೨ ರಂದು ನವದೆಹಲಿಯಲ್ಲಿ ನಡೆದ ೧೬೫ ನೇ ಆದಾಯ ತೆರಿಗೆ ದಿನಾಚರಣೆಯ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಹಣಕಾಸು ಸಚಿವಾಲಯದ ಪ್ರಕಾರ, ಕುಟ್ಟಯ್ಯ ಅವರ ನೇತೃತ್ವದ ಆದಾಯ ತೆರಿಗೆ ಅಧಿಕಾರಿಗಳ ತಂಡವು ಆಂಧ್ರ ಪ್ರದೇಶದಲ್ಲಿ ಅಂದಾಜು ರೂ. ೩,೦೦೦ ಕೋಟಿ ಮೊತ್ತದ ತೆರಿಗೆ ವಂಚನೆಯನ್ನು ಪತ್ತೆ ಹಚ್ಚುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಸಾಧನೆಯ ಮೂಲಕ ದೇಶದಲ್ಲಿ ಆರ್ಥಿಕ ಅವ್ಯವಹಾರವನ್ನು ತಡೆಯುವ ಪ್ರಯತ್ನದಲ್ಲಿ ಮಹತ್ತರ ಹೆಜ್ಜೆ ಎಂದು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಮುಕ್ಕಾಟಿರ ಪುನಿತ್ ಕುಟ್ಟಯ್ಯ ಅವರು ೨೦೧೭ ರಲ್ಲಿ ಯುಪಿಎಸ್‌ಸಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ ೩೨೪ ನೇ ರ‍್ಯಾಂಕ್ ಪಡೆದು ನಾಗರಿಕ ಸೇವೆಗೆ ಆಯ್ಕೆಗೊಂಡರು. ಅವರು ೨೦೧೭ ರಿಂದಲೂ ಹೈದರಾಬಾದ್ ನಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದಾರೆ.

ಇವರು ಅಮ್ಮತ್ತಿ ಗುಡ್‌ಶೆಫರ್ಡ್ಸ್ ಕಾನ್ವೆಂಟ್ ಮತ್ತು ಕೂರ್ಗ್ ಪಬ್ಲಿಕ್ ಸ್ಕೂಲ್‌ನಲ್ಲಿ ಓದಿದ್ದಾರೆ. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೯೦ ಹಾಗೂ ಪಿಯುಸಿಯಲ್ಲಿ ಶೇ.೯೨ ಅಂಕ ಗಳಿಸಿದ್ದ ಇವರು ೨೦೧೫ ರಲ್ಲಿ ಯುಪಿಎಸ್‌ಸಿ ಯ ಪರೀಕ್ಷೆಯಲ್ಲಿ (ಆಖಿಲ ಭಾರತ) ೮ನೇ ರ‍್ಯಾಂಕ್ ಪಡೆದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಎಸ್‌ಪಿ ಆಗಿ ಆಯ್ಕೆಯಾದರು. ನಂತರ ೨೦೧೬ ರಲ್ಲಿ, ಅವರು ಮತ್ತೆ ಸಿವಿಲ್ ಸರ್ವೀಸಸ್ ಪರೀಕ್ಷೆಗಳಿಗೆ ಹಾಜರಾಗಿ ಅಖಿಲ ಭಾರತ ೫೦೧ ನೇ ರ‍್ಯಾಂಕ್ ಗಳಿಸಿದರು.೨೦೧೭ ರಲ್ಲಿ ಮತ್ತೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು ೩೨೪ ನೇ ಸ್ಥಾನ ಗಳಿಸಿದರು.ಇವರು ಕೊಡಗಿನ ಬೈರಂಬಾಡ ಗ್ರಾಮದ ಕಾಫಿ ಬೆಳೆಗಾರ ಮುಕ್ಕಾಟಿರ (ದೇವಣಗೇರಿ) ಪ್ರಕಾಶ್ ಬೆಳ್ಳಿಯಪ್ಪ ಮತ್ತು ಜಮುನಾ ಅಚ್ಚಮ್ಮ (ತಾಮನೆ:ಬಡುವಂಡ) ದಂಪತಿಯ ಪುತ್ರ.

Tags: certificate of excellenceGovernment of IndiaIRS officer Mukkatira Punit Kuttayya
Previous Post

ಬಲರಾಮ ಸಿನಿಮಾಗೆ ಕಲ್ಕಿ ಡೈರೆಕ್ಟರ್ ಮ್ಯೂಸಿಕ್ ಮಾಡಲು ಬಂದ್ರು..!

Next Post

Massive waterlogging in the new Parliament building

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post

Massive waterlogging in the new Parliament building

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada