• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
February 10, 2026
in Top Story, ಕರ್ನಾಟಕ, ರಾಜಕೀಯ
0
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Share on WhatsAppShare on FacebookShare on Telegram

 

ADVERTISEMENT

ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು.

ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರು ಸಬಲೀಕರಣ ಸಾಧ್ಯವಾಗಿದೆ,” ಎಂದರು.

“ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕಲೆ ಮತ್ತು ಕರಕುಶಲತೆ, ಕಸೂತಿ ಮತ್ತು ಟೈಲರಿಂಗ್ ಮತ್ತು ಕಂಪ್ಯೂಟರ್ ಕೌಶಲ್ಯಗಳಲ್ಲಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ವಿತರಿಸಿದ ಪ್ರಮಾಣ ಪತ್ರವು ಕೇವಲ ಅರ್ಹತೆಯನ್ನು ಪ್ರತಿನಿಧಿಸುವುದಿಲ್ಲ, ಅವರಲ್ಲಿ ಆತ್ಮ ವಿಶ್ವಾಸ, ಸ್ವಾವಲಂಬನೆ ಮತ್ತು ಹೊಸ ಆರಂಭದತ್ತ ದಿಟ್ಟ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ,” ಎಂದು ಹೇಳಿದರು.

“ಕೇಳಚಂದ್ರ ಫೌಂಡೇಶನ್‌ನ ಈ ಉಪಕ್ರಮವು ಮಹಿಳೆಯರಲ್ಲಿ ಕೌಶಲ್ಯಗಳನ್ನು ಪೋಷಿಸುವುದರ ಜತೆಗೆ ಅವರ ಜೀವನೋಪಾಯಕ್ಕೆ ಅವಕಾಶ ಮಾಡಿಕೊಡುವುದಾಗಿದೆ. ಅಲ್ಲದೆ, ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಮತ್ತು ಘನತೆಯನ್ನು ಸಾಧಿಸಲು ಅನುವು ಮಾಡಿಕೊಡುವ ಬದ್ಧತೆಯ ಕಾರ್ಯಕ್ರಮವಾಗಿದೆ. ತರಬೇತಿ ಪಡೆದ ಮಹಿಳೆಯರು ಸಬಲರಾಗಿ ತಮಗಾಗಿ, ತಮ್ಮ ಕುಟುಂಬಗಳು ಹಾಗೂ ಸಮುದಾಯಗಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಲು ಸಿದ್ಧರಾಗಿದ್ದಾರೆ,” ಎಂದು ತಿಳಿಸಿದರು.

“ತರಬೇತಿ ಪಡೆದಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಸ್ವಾಲಂಬಿಗಳಾಗುವತ್ತ ನಿಮ್ಮ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವು ನಿಜವಾಗಿಯೂ ಸ್ಪೂರ್ತಿದಾಯಕ. ಈ ಮೈಲಿಗಲ್ಲು ನಿಮಗೆ ಸಾಕಷ್ಟು ಆರ್ಥಿಕ ಅವಕಾಶಗಳನ್ನು ಕಲ್ಪಿಸುವುದರ ಜತೆಗೆ ಯಶಸ್ಸಿನ ಬಾಗಿಲು ತೆರೆಯಲಿ,” ಎಂದು ಸುಜಾ ಜಾರ್ಜ್ ಹಾರೈಸಿದರು.

ಕೇಳಚಂದ್ರ ಫೌಂಡೇಶನ್‌ನ ನಿರ್ದೇಶಕಿ ಡಾ.ತಿವೇಣಿ ಅವರು ಮಾತನಾಡಿ, ಸರ್ವಜ್ಞನಗರ ಕ್ಷೇತದ ಮಹಿಳೆಯರಿಗೆ ಶಕ್ತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಸಚಿವ ಕೆ.ಜೆ.ಜಾರ್ಜ್ ಅವರು ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ ಕೌಶಲ್ಯ ತರಬೇತಿ ಕಂದ್ರ ಆರಂಭವಾಗುವಂತೆ ನೋಡಿಕೊಂಡರು. ಪಸ್ತುತ ಇಲ್ಲಿ ಸಾವಿರಾರು ಮಂದಿ ಡಯಾಲಿಸಿಸ್ ಸೌಲಭ್ಯ ಪಡೆಯುುದರೊಂದಿಗೆ ಕೌಶಲ್ಯ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ,” ಎಂದರು.

15 ವರ್ಷದಲ್ಲಿ ನಂ. ಒನ್ ಕ್ಷೇತ್ರ:
ವಾರ್ಡ್ ಅಧ್ಯಕ್ಷ ಎರನ್ ಸುರೇಶ್ ಮಾತನಾಡಿ, “ಕೌಶಲ್ಯ ಅಭಿವೃದ್ಧಿ, ಶಿಕ್ಷಣ ಕ್ಷೇತ್ರಕ್ಕೆ ಚಿವ ಕೆ.ಜೆ.ಜಾರ್ಜ್ ಅವರು ಗಣನೀಯ ಕೊಡುಗೆ ನೀಡಿದ್ದು, ಅವರ ಜನಪರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾಸಭಾ ಕ್ಷೇತ್ರವು ರಾಜ್ಯದ ಅನೇಕ ಕ್ಷೇತ್ರಗಳಿಂದ ಹತ್ತು ವರ್ಷದಷ್ಟು ಮುದುವರಿದಿದೆ. ಕ್ಷೇತ್ರದಲ್ಲಿ ಶಾಲೆಗೆ ಶಿಕ್ಷಕರು, ಮಕ್ಕಳ ಕೊರತೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರ ನೇತೃತ್ದಲ್ಲಿ ಇನ್ನು 15 ವರ್ಷದಲ್ಲಿ ಸರ್ವಜ್ಞನಗರ ಕ್ಷೇತ್ರವು ರಾಜ್ಯದಲ್ಲೇ ನಂಬರ್ ವನ್ ವಿಧಾಸಭಾ ಕ್ಷೇತ್ರವಾಗಿ ಹೊರಹೊಮ್ಮಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಡೀ ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್ | Public TV

“ಸರ್ವಜ್ಞನಗರ ಕ್ಷೇತ್ರದ ನಾಗರಿಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಅವರಿಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಕೇಳಚಂದ್ರ ಫೌಂಡೇಷನ್ ವತಿಯಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದು ಪ್ರಮಾಣಪತ್ರ ಪಡೆದ ಎಲ್ಲರಿಗೂ ಅಭಿನದನೆಗಳು. ಭವಿಷ್ಯದಲ್ಲಿ ನಿಮ್ಮ ಯಶಸ್ಸುಇತರರಿಗೂ ಸ್ಪೂರ್ತಿಯಾಗಿ ಅವರೂ ಕೌಶಲ್ಯವಂತರಾಗಲಿ ಎಂದು ಹಾರೈಸುತ್ತೇನೆ.”
ಕೆ.ಜೆ.ಜಾರ್ಜ್, ಇಂಧನ ಸಚಿವರು

Tags: cm siddaramaiah kj georgeEnergy Minister KJ Georgehc mahadevappa vs kj georgeK J Georgek j george biokj georegKJ Georgekj george daughterkj george dks meetingkj george edkj george embassy groupkj george housekj george interviewkj george it raidkj george latest newskj george newskj george reactionkj george resignationkj george resignation newskj george sonkj george speechkj george today newsminister kj georgepower minister kj georgeprotest against kj george
Previous Post

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

Next Post

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada