ಬೆಂಗಳೂರು: ಚೈತ್ರ ಕುಂದಾಪುರ ಆ್ಯಂಡ್ ಗ್ಯಾಂಗ್ನಿಂದ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್, 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 29ರವರೆಗೆ ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ, ಮಹಜರು ಪ್ರಕ್ರಿಯೆ ನಡೆಸಬೇಕರುವುದರಿಂದ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಸಿಸಿಬಿ, ನ್ಯಾಯಾಧೀಶರ ಮುಂದೆ ಮನವಿ ಮಾಡಿದೆ. ಸಿಸಿಬಿಯ ಈ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 29ರ ವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎನ್ನುವರಿಗೆ ಕೋಟ್ಯಂತರ ರೂಪಾಯಿ ತೆಗೆದುಕೊಂಡು ವಂಚನೆ ಪ್ರಕರಣದಲ್ಲಿ ಈಗಾಗಲೇ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಬಂಧನವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಇಷ್ಟು ದಿನ ತಲೆಮರೆಸಿಕೊಂಡಿದ್ದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀಯನ್ನು ನಿನ್ನೆ (ಸೆಪ್ಟೆಂಬರ್ 19) ಒಡಿಶಾದ ಕಟಕ್ನಲ್ಲಿ ಬಂಧಿಸಲಾಗಿತ್ತು.